ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆ ಕುಂದಾಪುರ ಇವರ ವತಿಯಿಂದ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ಮೈಸೂರು ಇದರ ಔಟ್‌ರೀಚ್ ಸರ್ವೀಸ್ ಸೆಂಟರ್‌ನ ನೂತನ ಕಟ್ಟಡ ಹಾಗೂ ನೂತನ ಡಯಾಲಿಸಿಸ್ ಘಟಕದ ಉದ್ಘಾಟನಾ ಸಮಾರಂಭವು ಫೆಬ್ರವರಿ 10 ರಂದು ಬೆಳಗ್ಗೆ 9.30 ಕ್ಕೆ ಕುಂದಾಪುರ ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್ ಉದ್ಘಾಟಿಸಲಿದ್ದು, ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿö್ಮÃ ಆರ್ ಹೆಬ್ಬಾಳ್ಕರ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್ ಬೋಜೇಗೌಡ, ಡಾ. ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ವಿ ಸುನಿಲ್ ಕುಮಾರ್, ಗುರುರಾಜ ಶೆಟ್ಟಿ ಗಂಟಿಹೊಳೆ, ಯಶ್‌ಪಾಲ್ ಎ ಸುವರ್ಣ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಪುರಸಭಾ ಸದಸ್ಯೆ ದೇವಕಿ ಪಿ ಸಣ್ಣಯ್ಯ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಕುಂದಾಪುರ ಸಹಾಯಕ ಕಮೀಷನರ್ ರಶ್ಮಿ ಎಸ್.ಆರ್, ಮೈಸೂರು ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯ ನಿರ್ದೇಶಕಿ ಪ್ರೊ.ಎಮ್ ಪುಷ್ಪವತಿ, ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿ ಡಾ.ಐ.ಪಿ ಗಡಾದ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ