ಸಾಣೂರು ಗ್ರಾ.ಪಂಚಾಯತ್ - "ಸಂವಿಧಾನಜಾಗೃತಿ ಜಾಥ"

Upayuktha
0

ಉಡುಪಿ:  ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಕಾರ್ಕಳ ತಾಲೂಕು ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗುರುವಾರ "ಸಂವಿಧಾನಜಾಗೃತಿ ಜಾಥ" ಕಾರ್ಯಕ್ರಮ ನಡೆಯಿತು.


ಸಾಣೂರು ಸರಕಾರಿ ಪದವಿಪೂರ್ವ ಕಾಲೇಜು ಹಾಗೂ ವರ್ಧಮಾನ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ಪಥ ಸಂಚಲನ ಹಾಗೂ ಬಲೂನ್ ಹಾರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಉಪನ್ಯಾಸಕಿ ಸೀಮಾ, ಅಂಬೇಡ್ಕರ್ ಕುರಿತು ಉಪನ್ಯಾಸ ನೀಡುತ್ತಾ ಮಾತನಾಡಿ,  ಸಂವಿಧಾನಕ್ಕೆ ಡಾ: ಬಿ.ಆರ್. ಅಂಬೇಡ್ಕರ್ ರವರು ನೀಡಿದ ಕೊಡುಗೆ ಅಪಾರ ವಾದುದು. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಧೈಯ ವಾಕ್ಯದೊಂದಿಗೆ ಸಂವಿಧಾನ  ರಚಿಸಿದ್ದಾರೆ. ಸಂವಿಧಾನವನ್ನು ನಾವು ಗೌರವಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ ಎಂದು ಸಂವಿಧಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. 


ಕಾಲೇಜಿನ ಪ್ರಾಂಶುಪಾಲ ಸುಚೇತ ಕಾಮತ್  ಸಂವಿಧಾನ ಪೀಠಿಕೆಯನ್ನು ಭೋಧಿಸಿದರು. 


ಸಂವಿಧಾನ ಕುರಿತಾದ ವಿವಿಧ ಸ್ಪರ್ಧೆಯನ್ನು ಶಾಲಾ ಮಕ್ಕಳಿಗೆ ಗ್ರಾಮ ಪಂಚಾಯತ್ ವತಿಯಿಂದ ನಡೆಸಲಾಗಿದ್ದು ವಿಜೇತರಿಗೆ ಬಹುಮಾನ ವಿತರಿಸಲಾಯಿತು.


ಕಾಯಕ್ರಮದಲ್ಲಿ ಸಹಿ ಅಭಿಯಾನವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಯುವರಾಜ ಜೈನ್, ಉಪಾಧ್ಯಕ್ಷೆ ಯಶೋದ ಪಿ. ಶೆಟ್ಟಿ. ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ, ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ವರ್ಗದವರು, ಅಂಗನವಾಡಿ ಕಾರ್ಯಕರ್ತೆಯವರು. ಶಾಲಾ ಮುಖ್ಯೋಪಾಧ್ಯಾಯರು, ಶಶಿಕಲಾ ಕೆ. ಹೆಗ್ಡೆ, ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. 


ಶಿಕ್ಷಕ  ಗಣೇಶ ಮೊಗವೀರ  ಸ್ವಾಗತಿಸಿ, ವೀರೇಶ್ ಎಸ್. ಪಾತಾಳಿ ವಂದಿಸಿದರು. 



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top