ಉಜಿರೆ: ಹಿರಿಯ ಸಹಕಾರಿ ಧುರೀಣ ಬಾವಂತಬೆಟ್ಟು ನಿರಂಜನ್ ಅವರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ವಿರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಧ್ಯಮದವರ ಜೊತೆ ತಮ್ಮ ಪ್ರಕಟಣೆಯಲ್ಲಿ ರಾಜಕೀಯ, ಸಾಮಾಜಿಕ, ಧಾರ್ಮಿಕ ಹಾಗೂ ಸಹಕಾರಿ ರಂಗದಲ್ಲಿ ಅವರು ಉತ್ತಮ ಸೇವೆ-ಸಾಧನೆ ಮಾಡಿ ಚಿರಪರಿಚಿತರಾಗಿದ್ದರು. ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗೂ ಹಿಂದುಳಿದವರಿಗೆ ಸಹಕಾರಿ ಸಂಘಗಳ ಮೂಲಕ ಅವರು ಉತ್ತಮ ಸೇವೆ ನೀಡಿ ಆರ್ಥಿಕ ಪ್ರಗತಿಗೆ ಪ್ರೋತ್ಸಾಹ ನೀಡುತ್ತಿದ್ದರು. ಅವರು ನಮ್ಮ ಕ್ಷೇತ್ರದ ಅಭಿಮಾನಿಯೂ, ಭಕ್ತರೂ ಆಗಿದ್ದು ಎಲ್ಲಾ ಕಾರ್ಯಕ್ರಮಗಳಿಗೆ ಸಕ್ರಿಯ ಸಹಕಾರ ನೀಡುತ್ತಿದ್ದರು.
ಅವರ ಆತ್ಮಕ್ಕೆ ಚಿರಶಾಂತಿಯ ಹಾಗೂ ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನು ನೀಡಲೆಂದು ಶ್ರೀ ಮಂಜುನಾಥ ಸ್ವಾಮಿ ದೇವರಲ್ಲಿ ಪ್ರಾರ್ಥಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ







