ಪುತ್ತೂರು: ಇಂದು ನಾವು ಸಂಶೋಧನಾ ಯುಗದಲ್ಲಿದ್ದೇವೆ. ಮುಂದುವರಿದ ತಂತ್ರಜ್ಞಾನದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು, ಅದಕ್ಕಾಗಿ ನಮ್ಮಲ್ಲಿನ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳಬೇಕು. ಸೃಜನಶೀಲ ಮತ್ತು ವಿಮರ್ಶಾತ್ಮಕ ಆಲೋಚನೆಗಳು ನಮ್ಮ ಬೆಳವಣಿಗೆಗೆ ಸಹಕಾರಿ. ಶೈಕ್ಷಣಿಕವಾಗಿ ಕಲಿಯುವುದು ಕೇವಲ ಅಂಕ ಪಟ್ಟಿಗೆ ಸೀಮಿತವಾಗಿರುತ್ತದೆ. ಇಂತಹ ಫೆಸ್ಟ್ ಗಳಲ್ಲಿ ಭಾಗವಹಿಸುವುದರಿಂದ ನಮ್ಮಲ್ಲಿರುವ ಸಾಮರ್ಥ್ಯ ಹೆಚ್ಚುತ್ತದೆ ಇದು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ, ನಮ್ಮ ಯಶಸ್ಸಿಗೆ ದಾರಿಯಾಗುತ್ತದೆ ಎಂದು ಎ1 ಲಾಜಿಕ್ ಮಂಗಳೂರು ಇದರ ಸ್ಥಾಪಕ ಮತ್ತು ನಿರ್ದೇಶಕ ಪ್ರವೀಣ್ ಉಡುಪ ಹೇಳಿದರು.
ಇವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಆಯೋಜಿಸಿದ ರಾಷ್ಟ್ರೀಯ ಮಟ್ಟದ ಅಂತರ್ ಕಾಲೇಜು ಐಟಿ ಮತ್ತು ಸಾಂಸ್ಕೃತಿಕ ಉತ್ಸವ ಆಂತರ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ ಡಿ ಕಲ್ಲಾಜೆ ಮಾತನಾಡಿ ಇಂದು ಜಗತ್ತಿನಲ್ಲಿ ಹೊಸ ಹೊಸ ತಂತ್ರಜ್ಞಾನಗಳು ಆವಿಷ್ಕಾರಗೊಂಡಿದೆ. ನಾವು ಎಲ್ಲಾ ವಿಷಯವನ್ನು ಕಲಿಯುವ ಆಸಕ್ತಿ ಹೊಂದಿರಬೇಕು ಈ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ತಂತ್ರಜ್ಞಾನ ಆವಿಷ್ಕಾರ ಮಾಡಿರುವವರು ಮನುಷ್ಯರೇ, ಆದ್ದರಿಂದ ನಾವು ನಮ್ಮಲ್ಲಿರುವ ಸಾಮರ್ಥ್ಯವನ್ನು ವೃದ್ದಿಸಿಕೊಳ್ಳಬೇಕು. ಇಂದಿನ ಕಾರ್ಪೊರೇಟರ್ ಜಗತ್ತಿಗೆ ನಾವು ಸಿದ್ಧಗೊಳ್ಳಬೇಕು. ಇಂತಹ ಕಾರ್ಯಕ್ರಮಗಳು ವಿಷಯ ವಿನಿಮಯ ಮತ್ತು ನಮ್ಮ ಬೆಳವಣಿಗೆಗೆ ಸಹಕಾರಿ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ ಕೆ ಮಾತನಾಡಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಅತಿಥಿಗಳು ಭಾರತ ಮಾತೆ ಮತ್ತು ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ವೇದಿಕೆಗೆ ಆಗಮಿಸಿದರು.
ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಸಭಾ ಕಾರ್ಯಕ್ರಮದ ನಂತರ ವಿವಿಧ ಸ್ಪರ್ಧೆಗಳು ನಡೆದವು.
ಕಾರ್ಯಕ್ರಮವನ್ನು ಎಂಸಿಎ ವಿಭಾಗದ ನಿರ್ದೇಶಕಿ ಮತ್ತು ಕಾರ್ಯಕ್ರಮದ ಸಂಯೋಜಕಿ ಡಾ. ವಂದನಾ ಬಿ ಎಸ್ ಸ್ವಾಗತಿಸಿ,ಅಂಕುರಂ ಘಟಕದ ವಿದ್ಯಾರ್ಥಿ ಸಂಯೋಜಕ ಆಕಾಶ್ ಸಿ ಭಟ್ ವಂದಿಸಿ, ಎಂಸಿಎ ವಿಭಾಗದ ಉಪನ್ಯಾಸಕಿ ಪ್ರೊ. ನೀಮಾ ಹೆಚ್ ನಿರ್ವಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ