ಹಿರಿಯ ಪತ್ರಕರ್ತ ಈಶ್ವರ ದೈತೋಟರಿಗೆ ವಿ. ನಾಗರಾಜ ರಾವ್ ಮಾಧ್ಯಮ ಪ್ರಶಸ್ತಿ

Upayuktha
0


ಬೆಂಗಳೂರು: ಹಿರಿಯ ಪತ್ರಕರ್ತ ಡಾ। ಈಶ್ವರ ದೈತೋಟ ಅವರು ಬಿಎಂಶ್ರೀ ಪ್ರತಿಷ್ಟಾನ ನೀಡುವ ವಿ. ನಾಗರಾಜ ರಾವ್ ಸಮೂಹ ಮಾಧ್ಯಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


ನಾಳೆ (ಫೆ.19) ನಡೆಯುವ ಸಮಾರಂಭದಲ್ಲಿ ಹಿರಿಯ ಸಾಹಿತಿ ಡಾ। ಕೆ. ಮರುಳಸಿದ್ದಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


ಈಶ್ವರ ದೈತೋಟ ಅವರು ಮೈಸೂರು ವಿಶ್ವವಿದ್ಯಾಲಯದ ಮೊದಲ ಬ್ಯಾಚ್‌ನಲ್ಲಿ ಸ್ನಾತಕೋತ್ತರ ಪತ್ರಿಕೋದ್ಯಮ ಪದವಿಯನ್ನು ರ್‍ಯಾಂಕ್ ನೊಂದಿಗೆ ಪಡೆದಿದ್ದರು. ಆ ಕಾಲಕ್ಕೆ ಏಷ್ಯಾದಲ್ಲೇ ಮೊದಲ ಬಾರಿಗೆ ಪತ್ರಿಕೋದ್ಯಮ ಸ್ನಾತಕೋತ್ತರ ಅಧ್ಯಯನಕ್ಕೆ ಅವಕಾಶವಿದ್ದುದು ಮೈಸೂರು ವಿವಿಯಲ್ಲಿ ಮಾತ್ರ.


ಈಶ್ವರ ದೈತೋಟ ಅವರು ಉದಯವಾಣಿ, ವಿಜಯ ಕರ್ನಾಟಕ, ಸಂಯುಕ್ತ ಕರ್ನಾಟಕ ಹಾಗೂ ಟೈಮ್ಸ್ ಆಫ್ ಇಂಡಿಯಾ ಕನ್ನಡ ಪತ್ರಿಕೆಗಳ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.


ಹಲವು ಮಂದಿ ಉದಯೋನ್ಮುಖ ಪತ್ರಕರ್ತರನ್ನು ಬೆಳಕಿಗೆ ತಂದ ಖ್ಯಾತಿ ಅವರದು. ಕನ್ನಡ ಪತ್ರಿಕೋದ್ಯಮಕ್ಕೆ ಅಭ್ಯುದಯ ಪತ್ರಿಕೋದ್ಯಮದ ಕಲ್ಪನೆಯನ್ನು ಪರಿಚಯಿಸಿದವರು ಅವರು. ಗ್ರಾಮೀಣ ಪತ್ರಕರ್ತರಿಗೆ ತರಬೇತಿ ಮತ್ತು ಗ್ರಾಮ ವಾಸ್ತವ್ಯದ ಪರಿಕಲ್ಪನೆಯನ್ನು ಕೂಡ ಈಶ್ವರ ದೈತೋಟರು ಬಹಳ ಹಿಂದೆಯೇ ಪರಿಚಯಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top