ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

Upayuktha
0



ಪುತ್ತೂರು:  ಒಂದು ವಿದ್ಯಾ ಸಂಸ್ಥೆಯ ಕೀರ್ತಿಯನ್ನು ಎಲ್ಲೆಡೆ ಹರಡುವವರು ಹಿರಿಯ ವಿದ್ಯಾರ್ಥಿಗಳು. ಅವರೇ ಕಾಲೇಜಿನ ರಾಯಭಾರಿಗಳಾಗಿರುತ್ತಾರೆ. ಇಂದು ನಮ್ಮ ಸಂಸ್ಥೆಯು ಹಲವಾರು ರೀತಿಯಲ್ಲಿ ಬೆಳೆದು ನಿಂತಿದೆ. ಹಿರಿಯ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ನೀಡಿ, ಸಂತಸ ಪಟ್ಟು ತಮ್ಮಿಂದಾದ ಸಹಾಯವನ್ನು ಇಲ್ಲಿನ ವಿದ್ಯಾರ್ಥಿಗಳಿಗೆ ನೀಡುತ್ತಾ ಬಂದಿದ್ದಾರೆ. ಸಂಸ್ಥೆಯ ಬೆಳವಣಿಗೆ ದೃಷ್ಟಿಯಿಂದ ಹಿರಿಯ ವಿದ್ಯಾರ್ಥಿಗಳ ಸಂಘವು ಬಹಳ ಅಗತ್ಯವಾಗಿರುತ್ತದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಹೇಳಿದರು.



ಇವರು ಪುತ್ತೂರಿನ  ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ )ಇಲ್ಲಿ 2000-2003 ರ ಸಾಲಿನ ಕಲಾ ಪದವಿಯ ವಿದ್ಯಾರ್ಥಿಗಳು ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ  ಮಾತನಾಡಿದರು. ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ.ಎನ್ ಮಾತನಾಡಿ ಹಳೆ ವಿದ್ಯಾರ್ಥಿಗಳ ಈ ಕಾರ್ಯವನ್ನು ಶ್ಲಾಘಿಸಿದರು.



ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಜಯಪ್ರಕಾಶ್ ಪ್ರಾಸ್ತವಿಕ ಮಾತನಾಡಿ ಗುರುವಂದನೆ ನೆರವೇರಿಸಿದರು ಮತ್ತು ಆರ್ಥಿಕವಾಗಿ ಹಿಂದುಳಿದ ಕಲಿಕೆಯಲ್ಲಿ ಮುಂದಿರುವ ಅರ್ಹ ಹತ್ತು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಯಿತು. ಕಾಲೇಜಿನ ಹಿರಿಯ ಉಪನ್ಯಾಸಕರು ಮತ್ತು ಹಿರಿಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ಹಂಚಿಕೊಂಡರು. ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೆರವೇರಿಸಲಾಯಿತು.



ವೇದಿಕೆಯಲ್ಲಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಮಾಧವ ಎಚ್.ಭಟ್, ಡಾ.ಪೀಟರ್ ವಿಲ್ಸನ್ ಪ್ರಭಾಕರ್, ಡಾ.ಪಿ.ಕೆ ಬಾಲಕೃಷ್ಣ, ಎಂ.ಎನ್ ಚೆಟ್ಟಿಯಾರ್, ಡಾ.ಶ್ರೀಧರ ಎಚ್.ಜಿ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಹಿರಿಯ ವಿದ್ಯಾರ್ಥಿಗಳಾದ ಡಾ. ಧನೇಶ್ವರಿ  ಸ್ವಾಗತಿಸಿ,  ನಳಿನಾಕ್ಷಿ ಕಾರಂತ್ ವಂದಿಸಿ, ವಿದ್ಯಾರಶ್ಮಿ ಪಿ.ಎನ್ ಹಾಗು ಮಂಜಪ್ಪ ದ್ಯಾಮಪ್ಪ ಗೋಣಿ ನಿರ್ವಹಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)
To Top