ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ಹಾಕಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗದ ಅಂತರ್ ಕಾಲೇಜ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ನಿಟ್ಟೆಯ NMAMIT ಯಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿದ್ದಾರೆ.
ಈ ವಿಜಯದೊಂದಿಗೆ ತಂಡವು ಫೆಬ್ರವರಿ 23 ಮತ್ತು 24 ರಂದು CIT ಪೊನ್ನಂಪೇಟೆಯಲ್ಲಿ ನಡೆಯುವ ರಾಜ್ಯಮಟ್ಟದ ಅಂತರ್ ಕಾಲೇಜ್ ಸ್ಪರ್ಧೆಯಲ್ಲಿ ಭಾಗವಹಿಸುವುದಕ್ಕೆ ಅರ್ಹತೆಯನ್ನು ಗಳಿಸಿಕೊಂಡಿದೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೆಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಈ ತಂಡಕ್ಕೆ ತರಬೇತಿ ಹಾಗೂ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ