ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಿಂದ ಅಭಯ ಆಶ್ರಯದಲ್ಲಿ ಮನೋರಂಜನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರವಿ ರೈ ವಹಿಸಿದರು.
ಮಂಗಳೂರು ವಿಶ್ವವಿದ್ಯಾನಿಲಯ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಯಶಸ್ವಿನಿ ಬಿ ಇವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು. ಅಭಯ ಆಶ್ರಯದಲ್ಲಿ ಇರುವ ವಯಸ್ಕರಿಗೆ ಚಟುವಟಿಕೆಗಳ ಜೊತೆ ಅವರಿಗಾಗಿ ಹಾಡು ಮತ್ತು ನೃತ್ಯ ಮಾಡುವುದರ ಮೂಲಕ ಮನೋರಂಜನ ಕಾರ್ಯಕ್ರಮ ನೀಡಲಾಯಿತು.
ವಯಸ್ಕರು ಕೂಡ ಕತೆ ಹೇಳುದರ ಮೂಲಕ, ಮತ್ತು ಹಾಡನ್ನು ಹೇಳುವುದರ ಮೂಲಕ ಕಾರ್ಯಕ್ರಮದಲ್ಲಿ ತಮ್ಮನ್ನು ತೊಡಗಿಕೊಂಡರು. ಕುಮಾರಿ ಪ್ರೀತಿ ಕಾರ್ಯಕ್ರಮ ನಿರೂಪಿಸಿದರು. ಕುಮಾರಿ ನೇಹಾ ದಿನೇಶ ಅತಿಥಿಗಳಿಗೆ ಧನ್ಯವಾದ ಸಮರ್ಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ