ಶಿವಮೊಗ್ಗ: ಭಾರತೀಯ ಜನತಾ ಪಕ್ಷ ಶಿವಮೊಗ್ಗ ಜಿಲ್ಲಾ ಯುವ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಸಂಸದ ಬಿ ವೈ ರಾಘವೇಂದ್ರ ಪಾಲ್ಗೊಂಡು ಹೊಸ ತಂಡಕ್ಕೆ ಶುಭ ಕೋರಿದರು.
ವಿಶ್ವದಲ್ಲೇ ಅತಿ ಹೆಚ್ಚು ಯುವ ಸಮೂಹವನ್ನು ಹೊಂದಿರುವ ಹೆಗ್ಗಳಿಕೆ ನಮ್ಮದು. ಪ್ರತಿಯೊಂದು ಕ್ಷೇತ್ರದಲ್ಲಿ ಯುವ ಸಮೂಹ ತನ್ನ ಛಾಪನ್ನು ಮೂಡಿಸಿ ಪ್ರಪಂಚವೇ ದೇಶದತ್ತ ತಿರುಗಿ ನೋಡುವಂತೆ ಸಾಧನೆಯ ಹೆಜ್ಜೆ ಇಡುತ್ತಿರುವುದು ನಮಗೆಲ್ಲ ಹೆಮ್ಮೆಯ ಸಂಗತಿ ಎಂದರು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೂಡ ಯುವಕರಿಗೆ ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿ ಜಾರಿಗೆ ತಂದು ಸಮಾಜದ ಮುಖ್ಯವಾಹಿನಿಗೆ ತಂದು ನಿಲ್ಲಿಸುತ್ತಿದೆ ಎಂದರು.
ಈ ಎಲ್ಲ ಅಶೋತ್ತರಗಳನ್ನು ಪೂರೈಸಲು ಶ್ರಮವಹಿಸಿರುವ ಮೋದಿ ಸರ್ಕಾರವನ್ನು ಸಂಪೂರ್ಣ ಬೆಂಬಲಿಸುವಂತೆ ಯುವಕರನ್ನು ಮನವೊಲಿಸಿ ಪಕ್ಷದತ್ತ ಹೆಚ್ಚಿನ ಮಟ್ಟದಲ್ಲಿ ಸೆಳೆದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಅಧಿಕ ಸ್ಥಾನ ಪಡೆಯಲು ಕೈಜೋಡಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಮೇಘರಾಜ್, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪ್ರಶಾಂತ್ ಕುಕ್ಕೆ, ಪ್ರಧಾನ ಕಾರ್ಯದರ್ಶಿ ದರ್ಶನ್ ಹಾಗೂ ಅರುಣ್ ಅವರು ಸೇರಿದಂತೆ ಪಕ್ಷದ ಅನೇಕ ಮುಖಂಡರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ







