
ಮಂಗಳೂರು: ಮಾರ್ಚ್ 1 ರಿಂದ 3ರವರೆಗೆ ಪಣಂಬೂರು ಬೀಚ್‌ನಲ್ಲಿ ನಡೆಯುವ ನಡೆಯುವ ಜಾನಪದ ಕಡಲು ಉತ್ಸವ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಅದಾನಿ ಗ್ರೂಪ್‌ನ ಅಧ್ಯಕ್ಷರಾದ ಕಿಶೋರ್ ಆಳ್ವ, ಹೇರಂಬ ಇಂಡಸ್ಟ್ರೀಸ್ ಲಿಮಿಟೆಡ್ ಮುಂಬಯಿಯ ಅಧ್ಯಕ್ಷ ಸದಾಶಿವ ಶೆಟ್ಟಿ ಕನ್ಯಾನ, ರೋಹನ್ ಕಾರ್ಪೊರೇಶನ್ ಸಂಸ್ಥಾಪಕ ರೋಹನ್
ಮೊಂತೆರೋ, ದಿವ್ಯರೂಪ ಕನ್ಸ್ಟ್ರಕ್ಷನ್ ಮಾಲಕ ಯಾದವ ಕೋಟ್ಯಾನ್ ಪೆರ್ಮುದೆ. ದೈವ ನರ್ತಕ ಮುಖೇಶ್ ಗಂಧಕಾಡ್ ಇವರಿಗೆ ಜಾನಪದ ಕಡಲು ಉತ್ಸವ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ರಶಸ್ತಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಲಿರುವರು. ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 1ರಂದು ಸಂಜೆ 6.30ಕ್ಕೆ ನಡೆಯಲಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ