ಮೋದಿ ಪ್ರಧಾನಿಯಾದ ನಂತರ ಹಿಂದೂ ಜೀವನ ಪದ್ಧತಿಗೆ ವಿಶ್ವದಲ್ಲಿ ಮನ್ನಣೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Upayuktha
0


ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ತಮ್ಮ ಎರಡನೇ ಹಂತದ ಪ್ರವಾಸದ ಎರಡನೇ ದಿನವಾದ ಇಂದು ಮುಲ್ಕಿ ಮೂಡಬಿದರೆ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ  ಮಾತನಾಡಿದರು.


ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಆದ ಬಳಿಕ ಹಿಂದೂ ಜೀವನ ಪದ್ಧತಿಗೆ ವಿಶ್ವದಲ್ಲಿ ಮನ್ನಣೆ ಸಿಕ್ಕಿದೆ ಎಂದು ಹೇಳಿದರು.


ಮುಲ್ಕಿ ಮೂಡಬಿದರೆ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶ ಕಿನ್ನಿಗೋಳಿ ಯುಗಪುರುಷ ಹಾಲ್‌ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶಾಸಕರಾದ ಉಮಾನಾಥ್‌ ಕೋಟ್ಯಾನ್‌, ಡಾ.ಭರತ್‌ ಶೆಟ್ಟಿ, ಹರೀಶ್‌ ಪೂಂಜಾ, ಪಕ್ಷದ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.


ಶನಿವಾರ ನಡೆದ ಚುನಾವಣಾ ಪ್ರಚಾರದ ಮದ್ಯೆ ಬ್ರಿಜೇಶ್‌ ಚೌಟ ಅವರು ಉಡುಪಿಯ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರನ್ನು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರದೀಪ್‌ ಕುಮಾರ್‌ ಕಲ್ಕೂರ ರವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ನಂತರ ಅವರು ಮುಲ್ಕಿ ಅರಮೆನೆಯ ಅರಸರಾದ ದುಗ್ಗಣ್ಣ ಸಾವಂತರನ್ನು ಮುಲ್ಕಿ ಅರಮನೆಯಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ದರ್ಶನ ಮಾಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top