ವೇಯ್ಟ್ ಲಿಫ್ಟಿಂಗ್: ಆಳ್ವಾಸ್ ಕಾಲೇಜಿಗೆ ಸಮಗ್ರ ಪ್ರಶಸ್ತಿ

Upayuktha
0


ವಿದ್ಯಾಗಿರಿ (ಮೂಡುಬಿದಿರೆ): ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಫ್‌ನಲ್ಲಿ ಆಳ್ವಾಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. 


ಮಂಗಳೂರಿನ ಎಸ್‌ಡಿಎಂ ಬಿಬಿಎಂ ಕಾಲೇಜಿನಲ್ಲಿ ಮಾರ್ಚ್ 18 ಮತ್ತು 19 ರಂದು ನಡೆದ ಸ್ಪರ್ಧೆಯಲ್ಲಿ ಆಳ್ವಾಸ್ ಪುರುಷರ ಮತ್ತು ಮಹಿಳೆಯರ ತಂಡವು ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದು, ಕಾಲೇಜು ಸಮಗ್ರ ತಂಡ ಪ್ರಶಸ್ತಿ ಜಯಿಸಿದೆ. 


ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜು 5 ಚಿನ್ನ, 3 ಬೆಳ್ಳಿ ಹಾಗೂ 2 ಕಂಚಿನ ಪದಕದೊಂದಿಗೆ ಒಟ್ಟು 61 ಅಂಕ ಪಡೆಯುವ ಮೂಲಕ ಅಗ್ರಸ್ಥಾನ ಪಡೆದಿದ್ದು, ಪ್ರೊ. ರಿಚರ್ಡ್ ರೆಬೆಲ್ಲೊ ರೋಲಿಂಗ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. 


40 ಅಂಕ ಪಡೆದ ಎಸ್‌ಡಿಎಂ ಕಾಲೇಜು ದ್ವಿತೀಯ ಹಾಗೂ ಅಷ್ಟೇ ಅಂಕ ಪಡೆದ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು ತೃತೀಯ ತಂಡ ಪ್ರಶಸ್ತಿ ಪಡೆಯಿತು. ಅತಿಥೇಯ ಎಸ್‌ಡಿಎಂ ಕಾಲೇಜು ಚತುರ್ಥ ತಂಡ ಪ್ರಶಸ್ತಿ ಪಡೆಯಿತು.


ಮಹಿಳಾ ವಿಭಾಗದಲ್ಲಿ ಸತತ 20ನೇ ಬಾರಿ ತಂಡ ಪ್ರಶಸ್ತಿ ಪಡೆದ ಆಳ್ವಾಸ್ ಕಾಲೇಜು, ಒಟ್ಟು 5 ಚಿನ್ನ, 3 ಬೆಳ್ಳಿ ಹಾಗೂ 2 ಕಂಚಿನ ಪದಕದೊಂದಿಗೆ ಶಿರ್ವ ಬ್ಲೊಸಮ್ ಮನ್ವಿನ್ ಸೆಲೆಸ್ಟಿನ್ ಡಿಸೋಜ ಟ್ರೋಫಿಗೆ ಮುತ್ತಿಕ್ಕಿತು. 


ಉಜಿರೆ ಎಸ್‌ಡಿಎಂ ಕಾಲೇಜು ದ್ವಿತೀಯ ಹಾಗೂ ಪುತ್ತೂರು ಸಂತ ಫಿಲೋಮಿನಾ ಕಾಲೇಜು ತೃತೀಯ ಸ್ಥಾನ ಪಡೆದಿದೆ.  


ವೇಯ್ಟ್ ಲಿಫ್ಟಿಂಗ್‌ನಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಮಾಡಿದ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.  


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top