ಪುತ್ತೂರು ವಿವೇಕಾನಂದ ಕಾಲೇಜಿನ ಪುರುಷರ ವಾಲಿಬಾಲ್ ತಂಡದ ಸಾಧನೆ

Upayuktha
0



ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ವಾಲಿಬಾಲ್ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ರಾಜ್ಯಮಟ್ಟದ ಅಂತರ್ ಕಾಲೇಜಿ ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. 



ಉಜಿರೆಯ ಎಸ್‍ಡಿಎಂಐಟಿ ಯಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ತಂಡವು ಉತ್ತಮ ಸಾಧನೆಯೊಂದಿಗೆ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದೆ. ವಾಲಿಬಾಲ್ ಸ್ಪರ್ಧೆಯಲ್ಲಿ ಕಾಲೇಜು ಪ್ರಥಮ ಬಾರಿಗೆ ರಾಜ್ಯಮಟ್ಟದ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ವಿಶ್ವವಿದ್ಯಾನಿಲಯ ಮಟ್ಟದ 8 ವಿಭಾಗಗಳ ಒಟ್ಟು 16 ತಂಡಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದವು.



ಈ ಮೊದಲು ಉಜಿರೆಯ ಎಸ್‍ಡಿಎಂಐಟಿ ಯಲ್ಲಿ ನಡೆದ ಮಂಗಳೂರು ವಿಭಾಗ ಮಟ್ಟದ ಸ್ಪರ್ಧೆಯಲ್ಲಿಯೂ ಕಾಲೇಜಿನ ತಂಡವು ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿತ್ತು. ಇದರಲ್ಲಿ ಮಂಗಳೂರು ವಿಭಾಗದ ಒಟ್ಟು 18 ತಂಡಗಳು ಭಾಗವಹಿಸಿದ್ದವು.  ಕಾಲೇಜಿನ ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಅಖಿಲೇಶ್ ವಿಭಾಗ ಹಾಗೂ ರಾಜ್ಯಮಟ್ಟದ ಸ್ಪರ್ಧೆಗಳೆರಡರಲ್ಲೂ ಉತ್ತಮ ಆಲ್ರೌಂಡರ್ ಪ್ರಶಸ್ತಿಯನ್ನು ಮುಡಿಗೇರಿಕೊಂಡಿದ್ದಾರೆ.



ಚಿಂತನ್, ಅಜಯ್‍ನಾತ್ ಶೆಟ್ಟಿ, ಭುವನ್, ಚೇತಕ್, ಪುನೀತ್.ಕೆ, ಸುಜನ್.ಪಿ, ಪವಿತ್, ಮನೋಹರ, ರಿತೇಶ್ ಕುಮಾರ್, ರಕ್ಷಿತ್ ರಾಜ್,  ಜೀವನ್ ತಂಡದ ಸದಸ್ಯರಾಗಿದ್ದಾರೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ತಂಡಕ್ಕೆ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  



Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top