ಬಪ್ಪಳಿಗೆ ಅಂಬಿಕಾ ವಿದ್ಯಾಲಯ (ಸಿಬಿಎಸ್‌ಇ) ಶಿಕ್ಷಕ-ರಕ್ಷಕ ಸಂಘದ ಸಭೆ
ಪುತ್ತೂರು: ಅಂಬಿಕಾ ವಿದ್ಯಾಲಯ(ಸಿಬಿಎಸ್‌ಇ)ದ ದಶಮಾನೋತ್ಸವ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಿದ್ದು, ಎಪ್ರಿಲ್ 24ರಂದು ಸಾರ್ವಜನಿಕ ಗುರುವಂದನೆ ಹಾಗೂ ಚಂದ್ರಮೌಳೇಶ್ವರ ಪೂಜೆ ನಡೆಯಲಿದೆ. ಏ.25ರಂದು ಬೆಳಗ್ಗೆ ದಶಮಾನೋತ್ಸವ ಸಮಾರೋಪ ಸಮಾರಂಭ ನಡೆಯಲಿದೆ. ಈ ಸಂದರ್ಭದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ, ಶೃಂಗೇರಿಯ ಶಾರದಾ ಪೀಠಾಧೀಶ್ವರ ಶ್ರೀಮಜ್ಜ ಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥ ಗುರುಗಳು ಆಶೀರ್ವಚನ ನೀಡಲಿದ್ದಾರೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.
ಅವರು ನಗರದ ನಟ್ಟೋಜ ಪೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ (ಸಿಬಿಎಸ್‌ಇ)ದಲ್ಲಿ ಮಾ.9ರಂದು ಹಮ್ಮಿಕೊಂಡಿದ್ದ ಶಿಕ್ಷಕ ರಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದಶಮಾನೋತ್ಸವ ಸಮಾರೋಪ ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ವಿವಿಧ ಸಮಿತಿಗಳನ್ನು ರಚಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಅರ್ಹ ವಿದ್ಯಾರ್ಥಿಗಳಿಗೆ ದತ್ತು ನಿಧಿಯಿಂದ 10 ಸಾವಿರ ರೂ. ಸಹಾಯಧನ ನೀಡಲು ನಿರ್ಣಯಿಸಲಾಯಿತು.
ಶಾಲಾ ದಶಮಾನೋತ್ಸವ ಸಮಿತಿ ಅಧ್ಯಕ್ಷ ಮಹೇಶ್ ಕಜೆ, ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಸೀಮಾ ನಾಗರಾಜ್, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಬಾಲಕೃಷ್ಣ ಬೋರ್ಕರ್, ಪ್ರಾಂಶುಪಾಲೆ ಮಾಲತಿ ಡಿ., ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು.
ಶಿಕ್ಷಕಿ ಗೌರಿ ಕಾರ್ಯಕ್ರಮ ನಿರ್ವಹಿಸಿದರು. ಶ್ರುತಿ ನಾಯಕ್ ಸ್ವಾಗತಿಸಿ, ಶೈಲಶ್ರೀ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ