ಕಾಂತಾವರ: ಕಾಂತಾವರ ಕನ್ನಡ ಸಂಘದಲ್ಲಿ ಗಮಕಿ ಸತೀಶ್ ಕುಮಾರ್ ಕೆಮ್ಮಣ್ಣು ಅವರು ಸ್ಥಾಪಿಸಿರುವ ದತ್ತಿನಿಧಿಯ ‘ಗಮಕಕಲಾ ಪ್ರವಚನ’ ಪ್ರಶಸ್ತಿಗೆ ಪ್ರಸಿದ್ಧ ವಾಗ್ಮಿಗಳಾಗಿರುವ ಶ್ರೀ ಮುನಿರಾಜ ರೆಂಜಾಳ ಅವರು, ಗಮಕಿ ಶ್ರೀಮತಿ ಯಾಮಿನಿ ಭಟ್ ಉಡುಪಿ ಅವರು ಸಂಘದಲ್ಲಿ ಸ್ಥಾಪಿಸಿರುವ ದತ್ತಿನಿಧಿಯ ‘ಗಮಕಕಲಾ ವಾಚನ’ ಪ್ರಶಸ್ತಿಗೆ ಗಮಕಿ ಶ್ರೀ ಸುರೇಶ್ ರಾವ್ ಅತ್ತೂರು ಅವರು ಮತ್ತು ‘ಶಿಲ್ಪಗುರು’ ಪ್ರಶಸ್ತಿ ಪುರಸ್ಕೃತ ಶಿಲ್ಪಿ ಕಾರ್ಕಳದ ಶ್ರೀ. ಕೆ.ಶಾಮರಾಯ ಆಚಾರ್ಯ ಅವರ ದತ್ತಿನಿಧಿಯಿಂದ ಸಂಘವು ನೀಡುವ ಶಿಲ್ಪಕಲಾ ಪ್ರಶಸ್ತಿಗೆ ಲೋಹಶಿಲ್ಪಿ ಕಾರ್ಕಳದ ಪ್ರಕಾಶ್ ಆಚಾರ್ಯ ಅವರು ಆಯ್ಕೆಯಾಗಿರುವುದಾಗಿ ಕನ್ನಡ ಸಂಘದ ಪ್ರಕಟಣೆ ತಿಳಿಸಿದೆ.
ಇದೇ ಮಾ. 24ರಂದು ಕಾಂತಾವರದ ‘ಕನ್ನಡ ಭವನ’ದಲ್ಲಿ ಈಗಾಗಲೇ ಘೋಷಣೆಯಾಗಿರುವ 2023ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಡಾ. ವಿ.ಎ.ಲಕ್ಷಣ ಅವರಿಗೆ ನೀಡುವುದರ ಜೊತೆಗೆ ಈ ಮೂರು ಪ್ರಶಸ್ತಿಗಳನ್ನು ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ಮೂಲಕ ನೀಡಲಾಗುವುದೆಂದು ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆಯವರು ತಿಳಿಸಿದ್ದಾರೆ. ಪ್ರತಿ ಪ್ರಶಸ್ತಿಯೂ ತಲಾ ಹತ್ತು ಸಾವಿರದ ನಗದು, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ