ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಅನೋಖಾ 2k24

Upayuktha
0



ಉಜಿರೆ: ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಇಂದು (ಮಾ. 21) ಸಂಖ್ಯಾಶಾಸ್ತ್ರ ವಿಭಾಗದ ಸಾಂಖ್ಯ ಅಸೋಸಿಯೇಷನ್ ವತಿಯಿಂದ ‘ಅನೋಖಾ -2024’ ಅಂತರ್-ತರಗತಿ ಫೆಸ್ಟ್‌ ನಡೆಯಿತು.


 ಕಾಲೇಜಿನ ಉಪಪ್ರಾಂಶುಪಾಲ ‌ಪ್ರೊ. ಎಸ್.ಎನ್. ಕಾಕತ್ಕರ್ ಉದ್ಘಾಟನೆ ನೆರವೇರಿಸಿದರು.


ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, “ಅನೋಖ ಎಂದರೆ ಸೃಜನಶೀಲತೆ ಎಂದರ್ಥ. ವಿದ್ಯಾರ್ಥಿಯು ಜೀವನದಲ್ಲಿ ಚುರುಕಾಗಿರಬೇಕು ಮತ್ತು ವಿಶೇಷ ಗುರಿಗಳನ್ನು ಸಾಧಿಸಲು ಶ್ರಮಿಸಬೇಕು. ಈ ನಿಟ್ಟಿನಲ್ಲಿ ಪ್ರತಿಭೆಗಳನ್ನು ಪ್ರದರ್ಶಿಸುವ ಅವಕಾಶವನ್ನು ಒದಗಿಸುವಲ್ಲಿ ಈ ರೀತಿಯ ಕಾರ್ಯಕ್ರಮಗಳು ನಿರ್ಣಾಯಕ ಪಾತ್ರ ವಹಿಸುತ್ತವೆ” ಎಂದರು.


 ಕಾರ್ಯಕ್ರಮದ ಮುಖ್ಯ ಅತಿಥಿ, ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ, "ವಿದ್ಯಾರ್ಥಿಜೀವನವನ್ನು ಸುವರ್ಣ ಜೀವನವೆಂದು ಪರಿಗಣಿಸಿ ನಿಮ್ಮ ಸಮಯವನ್ನು ಆನಂದಿಸಿ. ಪ್ರತಿದಿನ ನೀವು ಸ್ಪರ್ಧಾತ್ಮಕ ಜಗತ್ತಿಗೆ ಹೊಂದಿಕೊಳ್ಳುವ ಹೊಸ ವಿಷಯಗಳನ್ನು ಕಲಿಯಿರಿ” ಎಂದು ಸಲಹೆ ನೀಡಿದರು.


 ಅತಿಥಿಗಳಿಗೆ ವಿಭಾಗದ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಒಟ್ಟು ಎಂಟು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ವಿಜ್ಞಾನ ನಿಕಾಯದ ಡೀನ್‌, ಸಂಖ್ಯಾಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ಸವಿತಾ ಕುಮಾರಿ, ಸಹಾಯಕ ಪ್ರಾಧ್ಯಾಪಕಿ ಮಂಜುಳಾ ಮತ್ತು ವಿದ್ಯಾರ್ಥಿ ಸಂಯೋಜಕರಾದ ಸಂಜಯ್ ಡಿ.ಕೆ. ಹಾಗೂ ನಾಗಶ್ರೀ ಆರ್. ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ದಿಶಾ ಸ್ವಾಗತಿಸಿ, ಗಾನಶ್ರೀ ವಂದಿಸಿ, ಅನನ್ಯ ಕಾರ್ಯಕ್ರಮ ನಿರೂಪಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top