ಸುರತ್ಕಲ್ : ಆಕಸ್ಮಿಕ ಅವಘಡದಲ್ಲಿ ಅಸುನೀಗಿದ ಅನುದಾನಿತ ವಿದ್ಯಾದಾಯಿನೀ ಪ್ರೌಢ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಾದ ಯಶ್ವಿತ್, ನಿರೂಪ್, ಅನ್ವಿತ್, ರಾಘವೇಂದ್ರ. ವಿ ಇವರಿಗೆ ಶಾಲಾ ವಜ್ರಮಹೋತ್ಸವ ಸಭಾಂಗಣದಲ್ಲಿ ಮೌನ ಪ್ರಾರ್ಥನೆ ಮತ್ತು ಶಾಂತಿಮಂತ್ರಗಳೊಂದಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.
ಸಂಘದ ಸಾರ್ವಜನಿಕ ಸಂಪರ್ಕಾಧಿಕಾರಿ, ಹಾಗೂ ಶಾಲಾ ಸಂಚಾಲಕರಾದ ಸುಧಾಕರ ರಾವ್ ಪೇಜಾವರ್, ಹಿಂದು ವಿದ್ಯಾದಾಯಿನೀ ಸಂಘದ ಜೊತೆ ಕೋಶಾಧಿಕಾರಿಯಾದ ರಮೇಶ್ ಟಿ.ಎನ್, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀನಿವಾಸ್ ಕುಳಾಯಿ ಮತ್ತು ಶಾಲಾ ಮುಖ್ಯೋಪಾಧ್ಯಾಯರಾದ ಬಾಲಚಂದ್ರ ಕೆ. ಗತಿಸಿದ ವಿದ್ಯಾರ್ಥಿಗಳಿಗೆ ನುಡಿನಮನವನ್ನು ಸಲ್ಲಿಸಿದರು.
ವೇದಿಕೆಯಲ್ಲಿ ಹಿಂದು ವಿದ್ಯಾದಾಯಿನೀ ಸಂಘದ ಜೊತೆ ಕಾರ್ಯದರ್ಶಿ ಎಂ ಜಿ. ರಾಮಚಂದ್ರ, ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀಧರ್ ಎಚ್, ಉಪಾಧ್ಯಕ್ಷರಾದ ಪ್ರಕಾಶ್ ಕರ್ಕೆರಾ, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ದೇವದಾಸ್, ಉಪಸ್ಥಿತರಿದ್ದರು. ಹಿಂದು ವಿದ್ಯಾದಾಯಿನೀ ಸಂಘದ ಸರ್ವ ಸದಸ್ಯರು, ವಿದ್ಯಾದಾಯಿನೀ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಕರು, ಶಿಕ್ಷಕರಕ್ಷಕ ಸಂಘದ ಪದಾಧಿಕಾರಿಗಳು ಸದಸ್ಯರು, ಪೋಷಕರು ಹಾಗೂ ಶಾಲೆಯ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ