ಧಾರ್ಮಿಕ ವಿಧಿವಿಧಾನಗಳು ಆರಂಭ
ಅಯೋಧ್ಯಾ ರಾಮನಿಗೆ 1008 ಕಲಶ ಸಹಿತ ಬ್ರಹ್ಮಕಲಶಾಭಿಷೇಕ
ಶ್ರೀ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಚಾರಿತ್ರಿಕ ಉತ್ಸವ
ಅಯೋಧ್ಯೆ: ಅಯೋಧ್ಯೆಯಲ್ಲಿ ಜನವರಿ 22 ರಂದು ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರ ಯಜಮಾನಿಕೆಯಲ್ಲಿ ನೂತನ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾನೆಯು ವಿಧ್ಯು ಕ್ತವಾಗಿ ನೆರವೇರಿತ್ತು. ಮರುದಿನದಿಂದ ಶ್ರೀ ಪೇಜಾವರ ಶ್ರೀಗಳ ದಿವ್ಯ ನೇತೃತ್ವದಲ್ಲಿ 48 ದಿನಗಳ ಮಂಡಲೋತ್ಸವ ಆರಂಭವಾಗಿತ್ತು.
ಇಂದು ಭಾನುವಾರ ಅದರ ಕೊನೆಯ ದಿನವಾಗಿದ್ದು ಶ್ರೀರಾಮನಿಗೆ ವೈಭವದಿಂದ 1008 ಕಲಶಾಭಿಷೇಕ ಸಹಿತ ಬ್ರಹ್ಮಕಲಶೋತ್ಸವ ನೆರವೇರಿಸುವ ಬಗ್ಗೆ ಬೆಳಿಗ್ಗೆಯಿಂದಲೇ ನೂರಾರು ಋತ್ವಿಜರ ಉಪಸ್ಥಿತಿಯಲ್ಲಿ ತತ್ವ ಹೋಮ ಸಹಿತ ವಿವಿಧ ಹೋಮ ಹವನಾದಿಗಳು, ಕಲಶ ಸ್ಥಾಪನಾ ಪೂರ್ವಕ ಕಲಶ ಪೂಜೆ ವಿಧಿ ವಿಧಾನಗಳು ಇದೀಗ ಆರಂಭವಾಗಿದೆ.
ಶ್ರೀರಾಮನ ಬ್ರಹ್ಮಕಲಶೋತ್ಸವ ನಿಮಿತ್ತ ಇಡೀ ರಾಮಮಂದಿರವನ್ನು ಆಕರ್ಷಕ ಪುಷ್ಪಗಳಿಂದ ಅಲಂಕರಿಸಲಾಗಿದೆ. ಮಂದಿರದಲ್ಲಿ ಇವತ್ತೂ ಅಸಂಖ್ಯ ಭಕ್ತರು ಸಾಲು ಸಾಲು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ.
ಪವಿತ್ರ ಕಲಶಾಭಿಷೇಕಕ್ಕೆ ಶ್ರೀಗಳು ಸರಯೂ ಮಾತ್ರವಲ್ಲದೇ ಗಂಗಾ ಅಲಕನಂದಾ ಸಹಿತ ಅನೇಕ ನದಿಗಳ ಪವಿತ್ರ ಜಲವನ್ನು ತರಿಸಿ ಬಳಸಿಕೊಂಡಿದ್ದಾರೆ. ಭಾನುವಾರ ಬೆಳಿಗ್ಗೆಯಿಂದಲೇ ಅಯೋಧ್ಯೆಯಲ್ಲಿ ಸಂಭ್ರಮ ಸಡಗರ ಕಾಣಿಸುತ್ತಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ