ಬಿಜೆಪಿಗೆ 3.5 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಖಚಿತ: ನಳಿನ್ ಕುಮಾರ್ ಕಟೀಲ್

Upayuktha
0




ಮಂಗಳೂರು: ಏಪ್ರಿಲ್ 26ರಂದು ನಡೆಯುವ ದಕ್ಷಿಣ ಕನ್ನಡ ಲೋಕಸಭೆ ಚುನಾವಣೆ ಪೂರ್ವಭಾವಿ ಸಭೆಯು ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರ ಅಧ್ಯಕ್ಷತೆಯಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲೆಯ ಚುನಾವಣಾ ಕಾರ್ಯಾಲಯದಲ್ಲಿ ನಡೆಯಿತು.


ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಮೋದಿ ಸರಕಾರದ ಅವಧಿಯಲ್ಲಿ ತಾನು ಜಿಲ್ಲೆಗೆ ತಂಡ ಒಂದು ಲಕ್ಷ ಕೋಟಿ ಅನುದಾನದ ಮಾಹಿತಿ ಯನ್ನು ಮನೆ ಮನೆಗೆ ತಿಳಿಸುವಂತೆ ಕರೆ ನೀಡಿದರು.


ನಿರಂತರ 15 ವರ್ಷಗಳ ಧೀರ್ಘ ಅವಧಿಗೆ ಸಂಸದನಾಗಿ ಕಾರ್ಯ ನಿರ್ವಹಿಸಲು ಸಹಕರಿಸಿದ ದೇವ ದುರ್ಲಭ ಕಾರ್ಯಕರ್ತರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾ ಮುಂದಿನ ಅಭ್ಯರ್ಥಿ ಬ್ರಿಜೇಶ್ ಚೌಟರಿಗೆ 3 ಲಕ್ಷ ಮತಗಳ ಅಂತರದಿಂದ ಗೆಲ್ಲಿಸುವಲ್ಲಿ ಎಲ್ಲರೂ ಕಾರ್ಯ ಪ್ರವೃತ್ತರಾಗಬೇಕೆಂದು ಚುನಾವಣಾ ಕಾರ್ಯನಿರ್ವಹಣಾ ತಂಡಕ್ಕೆ ಕೆಲವು ಸಲಹೆ ಸೂಚನೆಗಳನ್ನು ನೀಡಿದರು.


ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ನಿರ್ವಹಣಾ ಸಮಿತಿ ಸಂಚಾಲಕ ನಿತಿನ್ ಕುಮಾರ್, ಮಾಜಿ ಶಾಸಕರು, ಶಾಸಕರು, ಜಿಲ್ಲಾ ಪದಾಧಿಕಾರಿಗಳು, ಮಂಡಲ, ಮೋರ್ಚಾ ಪದಾಧಿಕಾರಿಗಳು, ಮಾದ್ಯಮ ಪ್ರಮುಖರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top