ಮಂಗಳೂರು: ಲೋಕಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಜೆಪಿ ಇಂದು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕದ 19 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳೂ ಸೇರಿವೆ.
ದಕ್ಷಿಣ ಕನ್ನಡದಿಂದ ಈ ಬಾರಿ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ (ಮೂರು ಬಾರಿ ಸಂಸದರಾಗಿದ್ದವರು) ಗೆ ಟಿಕೆಟ್ ಕೈತಪ್ಪಿದ್ದು, ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಲೋಕಸಭೆ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ನೀಡಲಾಗಿದೆ. ಅದೇ ರೀತಿ ಉಡುಪಿಯಿಂದ ಹಿರಿಯ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡಲಾಗಿದೆ. ಹಾಲಿ ಸಂಸದೆ, ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ. ಬೆಂಗಳೂರು ಉತ್ತರದ ಹಾಲಿ ಸಂಸದ ಡಿ.ವಿ ಸದಾನಂದ ಗೌಡರಿಗೆ ಟಿಕೆಟ್ ನಿರಾಕರಿಸಲಾಗಿದೆ.
ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದ್ದು, ಈ ಬಾರಿ ಯದುವೀರ ಚಾಮರಾಜ ಒಡೆಯರ್ ಅವರಿಗೆ ಅವಕಾಶ ನೀಡಲಾಗಿದೆ.
ಇತರ ಕ್ಷೇತ್ರಗಳ ಅಭ್ಯರ್ಥಿಗಳ ವಿವರ ಇಂತಿದೆ:
ಚಿಕ್ಕೋಡಿ: ಅಣ್ಣಾ ಸಾಹೇಬ್ ಜೊಲ್ಲೆ
ಬಾಗಲಕೋಟ: ಪಿ.ಸಿ ಗದ್ದಿಗೌಡರ್
ಹಾವೇರಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು ಗ್ರಾಮಾಂತರ: ಡಾ. ಸಿ.ಎನ್ ಮಂಜುನಾಥ್
ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ
ಬೆಂಗಳೂರು ಕೇಂದ್ರ: ಪಿ.ಸಿ ಮೋಹನ್
ತುಮಕೂರು: ವಿ. ಸೋಮಣ್ಣ
ಚಾಮರಾಜನಗರ: ಎಸ್. ಬಾಲರಾಜು
ಧಾರವಾಡ: ಪ್ರಲ್ಹಾದ್ ಜೋಷಿ
ಕೊಪ್ಪಳ: ಡಾ. ಬಸವರಾಜ ತ್ಯಾವಟೂರು
ದಾವಣಗೆರೆ: ಗಾಯತ್ರಿ ಸಿದ್ಧೇಶ್ವರ್
ಬಳ್ಳಾರಿ: ಬಿ. ಶ್ರೀರಾಮುಲು
ಕಲಬುರಗಿ: ಡಾ. ಉಮೇಶ್ ಜಾಧವ್
ಬೀದರ್: ಭಗವಂತ ಖೂಬಾ
ವಿಜಯಪುರ: ರಮೇಶ್ ಜಿಗಜಿಣಗಿ
ಶಿವಮೊಗ್ಗ: ಬಿ.ವೈ ರಾಘವೇಂದ್ರ
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ