ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಅಷ್ಟಬಂಧ ಲೇಪನ, ಪರಿಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ

Upayuktha
0


ಬಂಟ್ವಾಳ: ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳವರ ನೇತೃತ್ವದಲ್ಲಿ ನರಿಕೊಂಬು ಪಾಣೆಮಂಗಳೂರಿನಲ್ಲಿರುವ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಶುಕ್ರವಾರ ಬೆಳಗ್ಗೆ 9.06ರಿಂದ 10.34ರ ತನಕದ ಶ್ರವಣ ನಕ್ಷತ್ರದಲ್ಲಿ ಅಷ್ಟಬಂಧ ಲೇಪನ, ಪರಿಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಸಂಪನ್ನಗೊಂಡಿತು.


ಬ್ರಹ್ಮಕಲಶೋತ್ಸವ ನಡೆಯುವ ಹೊತ್ತಿನಲ್ಲೇ ದೇವಸ್ಥಾನದ ಪ್ರಾಂಗಣದಲ್ಲಿ ನೃತ್ಯಭಜನೆ ಯೋಗೀಶ್ ಸಪಲ್ಯ ಬೋಳಂತೂರು ಮತ್ತು ದಾಮೋದರ ನೆತ್ತರಕೆರೆ ಮಾರ್ಗದರ್ಶನದಲ್ಲಿ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಡಾ. ಕಮಲಾ ಪ್ರಭಾಕರ ಭಟ್ ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದೇವರನ್ನು ಒಲಿಸುವ ಮುಖ್ಯ ಕಾರ್ಯವನ್ನು ಭಜನೆಯಿಂದ ಮಾಡಲು ಸಾಧ್ಯ ಎಂದು ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.



ಈ ಸಂದರ್ಭ ವ್ಯವಸ್ಥಾಪನಾ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘುನಾಥ ಸೋಮಯಾಜಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್, ಕಾರ್ಯದರ್ಶಿ ಪದ್ಮನಾಭ ಮಯ್ಯ ಏಲಬೆ, ಸಂಚಾಲಕ ಪ್ರಕಾಶ್ ಕಾರಂತ ನರಿಕೊಂಬು, ಉದ್ಯಮಿಗಳಾದ ಗಣೇಶ್ ರಾವ್, ಸಾಯಿಚಂದ್ ಜೈನ್, ಪುರೋಹಿತರಾದ ವೇ.ಮೂ.ವೆಂಕಪ್ಪಯ್ಯ ಭಟ್, ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ಲೋಕೇಶ್ ಕೆ. ನರಹರಿನಗರ, ನೃತ್ಯಭಜನೆ ಸಂಯೋಜಕರಾದ ಯೋಗೀಶ್ ಸಪಲ್ಯ ಬೋಳಂತೂರು ಉಪಸ್ಥಿತರಿದ್ದರು.


ದಾಮೋದರ ನೆತ್ತರಕೆರೆ ಕಾರ್ಯಕ್ರಮ ನಿರ್ವಹಿಸಿದರು. ವ್ಯವಸ್ಥಾಪನಾ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘುನಾಥ ಸೋಮಯಾಜಿ ಎರಕಳ, ಉಪಾಧ್ಯಕ್ಷ ಬಿ.ರಘು ಸಪಲ್ಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಬಂಗೇರ, ಸಂಚಾಲಕ ಪ್ರಕಾಶ್ ಕಾರಂತ, ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಕಾರ್ಯದರ್ಶಿ ಪದ್ಮನಾಭ ಮಯ್ಯ ಏಲಬೆ, ವ್ಯವಸ್ಥಾಪನಾ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಲೋಕೇಶ್ ಕೆ. ನರಹರಿನಗರ, ಕೋಶಾಧಿಕಾರಿ ಕೆ.ಶಂಕರನಾರಾಯಣ ರಾವ್, ವಿವಿಧ ಸಮಿತಿಗಳ ಪ್ರಮುಖರು, ಸಂಚಾಲಕರು, ಸಹಸಂಚಾಲಕರು, ಪದಾಧಿಕಾರಿಗಳು ಹಾಗೂ ಸ್ಥಳೀಯ ಭಕ್ತರು ಉಪಸ್ಥಿತರಿದ್ದು, ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top