ಬಂಟ್ವಾಳ: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಸರ್ಕಾರಿ ಪದವಿ ಪೂರ್ವ ಕಾಲೇಜು, ಬೆಂಜನಪದವು ಇಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಕವಿತಾ ಹೇಮಚಂದ್ರ ವಿದ್ಯಾರ್ಥಿಗಳಲ್ಲಿರುವ ಸೇವಾ ಮನೋಭಾವದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲೆ ಡಾ. ಅನುಸೂಯ ರೈ, ವಿದ್ಯಾರ್ಥಿಗಳು ಶಿಸ್ತಿನಿಂದ ವರ್ತಿಸಿ ಕಾಲೇಜಿನ ಘನತೆ, ಗೌರವ ಕಾಪಾಡುವಂತೆ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ರೋಟರಿ ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ಬಾಳಿಗ, ಶಿಬಿರಾರ್ಥಿಗಳಿಗೆ ರಕ್ತದಾನದ ಮಹತ್ವ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಬೆಂಜನಪದವು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿ, ಉಪಾಧ್ಯಕ್ಷ ರಾಧಾಕೃಷ್ಣ ತಂತ್ರಿ, ಕಾರ್ಯಧ್ಯಕ್ಷ ವಾಮನ್ ಆಚಾರ್ಯ, ಸರಕಾರಿ ಪ್ರೌಢಶಾಲೆ, ಉಪಪ್ರಾಂಶುಪಾಲ ಅನಂತ ಪದ್ಮನಾಭ ಶಿಬರೂರು ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಘಟಕದ ಸಂಯೋಜನಾಧಿಕಾರಿ ಡಾ. ಸುರೇಶ್ ಸ್ವಾಗತಿಸಿ, ಡಾ. ಗಾಯತ್ರಿ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ