ಪೂರ್ಣ ಪ್ರಜ್ಞಾ ವಿದ್ಯಾಪೀಠ: ಅಯೋಧ್ಯೆ ಬಾಲರಾಮನ ಪ್ರತಿಷ್ಟಾಪನಾ ಕಾರ್ಯ ಮತ್ತು ಮಂಡಲೋತ್ಸವವನ್ನು ವೈಭವಯುತವಾಗಿ ನೇರವೇರಿಸಿದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ ಪಾದಂಗಳರವರಿಗೆ ಅಭಿವಂದನಾ ಸಮಾರಂಭವನ್ನು ಬೆಂಗಳೂರಿನಲ್ಲಿ ಇಂದು ಆಯೋಜಿಸಲಾಗಿತ್ತು.
ಡೊಡ್ಡ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅದ್ದೂರಿ ಶೋಭಾಯಾತ್ರೆಯ ಮೂಲಕ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.
ಅಭಿವಂದನಾ ಸಮಾರಂಭದಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿರವರು, ಬೇಲಿ ಮಠದ ಶಿವಾನುಭವ ಚಿರಮೂರ್ತಿ ಶಿವರುದ್ರ ಸ್ವಾಮೀಜಿರವರು, ನಿವೃತ್ತ ನ್ಯಾಯಮೂರ್ತಿ ದಿನೇಶ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಅಭಿನಂದನಾ ಸಮಿತಿ ಅಧ್ಯಕ್ಷ ಅರವಿಂದ್ ಲಿಂಬಾವಳಿ, ಶಾಸಕರಾದ ರವಿಸುಬ್ರಮಣ್ಯ, ಸಿ.ಕೆ.ರಾಮಮೂರ್ತಿರವರು, ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ಬಿಜೆಪಿ ಮುಖಂಡರಾದ ಸುಬ್ಬನರಸಿಂಹರವರು ಭಾಗವಹಿಸಿದ್ದರು.
ಭವ್ಯ ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಮತ್ತು ಬೈಕ್ ಜಾಥ ಮತ್ತು ಮಹಿಳೆಯರು ರಾಮ ಭಜನೆ ಮಾಡುತ್ತಾ ಸಾಗಿದರು.
ಅಭಿವಂದನೆ ಸ್ವೀಕರಿಸಿದ ಬಳಿಕ ಆಶೀರ್ವಚನ ನೀಡಿದ ಶ್ರೀಗಳು, ರಾಮ ಮಂದಿರದ ಕನಸು ನನಸಾಯಿತು. ಆದರೆ ರಾಮರಾಜ್ಯದ ಕನಸು ನನಸಾಗಬೇಕಿದೆ. ಇದಕ್ಕಾಗಿ ಎಲ್ಲರೂ ಕೈಜೋಡಿಸಿ ಶ್ರಮಿಸಬೇಕಿದೆ ಎಂದು ಕರೆ ನೀಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ