ಮಂಗಳೂರು: ಗೃಹರಕ್ಷಕರಿಗೆ ಹೃದಯ ಪುನಶ್ಚೇತನ ತರಬೇತಿ ಶಿಬಿರ

Upayuktha
0

ಹೃದಯ ಪುನಶ್ಚೇತನ  ಕೌಶಲ್ಯ ಅತ್ಯಗತ್ಯ: ಡಾ ಬಾಲಕೃಷ್ಣ

 



ಮಂಗಳೂರು : ಹೊಸದಾಗಿ ನೊಂದಾವಣೆಗೊಂಡ ಗೃಹರಕ್ಷಕರಿಗೆ ದ ಕ ಜಿಲ್ಲಾ ಗೃಹ ರಕ್ಷಕ ಕಛೇರಿ ಮೇರಿಹಿಲ್ ಮಂಗಳೂರಿನಲ್ಲಿ ಹೃದಯ ಪುನಶ್ಚೇತನ ಕೌಶಲ್ಯ ತರಬೇತಿ ಶಿಬಿರ ಮಾ.05 ಮಂಗಳವಾರದಂದು ನಡೆಯಿತು.



 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ ಜನರ ಜೀವ ಉಳಿಸಲು ಗೃಹರಕ್ಷಕರನ್ನು ತರಬೇತಿಗೊಳಿಸಿ ಅವರನ್ನು ಜೀವರಕ್ಷಕರನ್ನಾಗಿ ತಯಾರಿಸುವ ನಿಟ್ಟಿನಲ್ಲಿ ಈ ತರಬೇತಿಯನ್ನು ಆಯೋಜಿಸಲಾಗಿದೆ. ಅಪಘಾತ ಅಥವಾ ಇನ್ನಾವುದೇ ಅವಘಡಗಳಾದಾಗ ತಕ್ಷಣವೇ ಸ್ಪಂಧಿಸಲು ಈ ತರಬೇತಿ ಗೃಹರಕ್ಷಕರಿಗೆ ಅನುಕೂಲವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಡಾ ಬಾಲಕ್ರಷ್ಣ ಅವರು ಮಾತನಾಡಿ ಇಂತಹಾ ಶಿಬಿರಗಳಿಂದ ಸಮಾಜಕ್ಕೆ ಉತ್ತಮ ಸೇವೆ ಸಿಗುತ್ತದೆ ಎಂದು ನುಡಿದರು.



ಸಂಪನ್ಮೂಲ ವ್ಯಕ್ತಿಗಳಾಗಿ ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯರಾದ ಡಾ|| ಬಾಲಕ್ರಷ್ಣ, ಡಾ||ಅನಂತ್, ಡಾ|| ಗ್ಲೇನಿಟಾ, ಡಾ  ರಿತು.. ಮುಂತಾದವರು ಈ ಶಿಬಿರವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಮಂಗಳೂರು ಫಟಕಾಧಿಕಾರಿ ಮಾರ್ಕ್ ಶೆರಾ, ಹಿರಿಯ ಗೃಹರಕ್ಷಕರಾದ ಸುನಿಲ್, ಸಂಜಯ್ ,ಜ್ಞಾನೇಶ್ ಹಾಗೂ ಸುಮಾರು 46 ಮಂದಿ ಗೃಹರಕ್ಷಕ ಗೃಹರಕ್ಷಕಿಯರು ಈ ಶಿಬಿರದಲ್ಲಿ ಭಾಗವಹಿಸಿದ್ದರು



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top