ಅಯೋಧ್ಯೆಯ ಬಾಲರಾಮನಿಗೆ ಚಾಮರ ಸೇವೆಗೈದ ಕಾಂಗ್ರೆಸ್ ಶಾಸಕ ಮಂಜುನಾಥ ಭಂಡಾರಿ

Upayuktha
0


ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಉಡುಪಿ ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ 48 ದಿನಗಳ ಮಂಡಲೋತ್ಸವದಲ್ಲಿ ಇಂದು ಕಾಂಗ್ರೆಸ್‌ ಶಾಸಕ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಭಾಗವಹಿಸಿ ಬಾಲರಾಮನಿಗೆ ರಜತ ಕಲಶ ಹಾಗೂ ಚಾಮರ ಸೇವೆ ನೆರವೇರಿಸಿದರು.


ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮಭೂಮಿಯಲ್ಲಿ ನೂರಾರು ವರ್ಷಗಳ ಹೋರಾಟದ ಬಳಿಕ ನಿರ್ಮಾಣಗೊಂಡಿರುವ ಭವ್ಯ ರಾಮ ಮಂದಿರದಲ್ಲಿ ಬಾಲರಾಮನ ದರ್ಶನವನ್ನು ಪಡೆದು ಪುನೀತನಾದೆ ಎಂದು ಮಂಜುನಾಥ ಭಂಡಾರಿ ಪ್ರತಿಕ್ರಿಯಿಸಿದರು.


ಅಯೋಧ್ಯೆ ತೀರ್ಥಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿಯೂ ಆಗಿರುವ ಉಡುಪಿಯ ಪರಮಪೂಜ್ಯ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಬಾಲರಾಮನ ಪ್ರಾಣ ಪ್ರತಿಷ್ಠೆಯ ಮರುದಿನದಿಂದ 48 ದಿನಗಳ ವರೆಗೆ ಮಂಡಲೋತ್ಸವವನ್ನು ನಡೆಸುತ್ತಿದ್ದಾರೆ. ಈ ಉತ್ಸವದ ಸಂದರ್ಭದಲ್ಲಿ ಶ್ರೀರಾಮನ ದರ್ಶನ ಹಾಗೂ ಸೇವೆಯ ಭಾಗ್ಯ ಒದಗಿ ಬಂದಿರುವುದು ಪೂರ್ವಜನ್ಮದ ಪುಣ್ಯವೇ ಸರಿ. ಈ ಅವಕಾಶವನ್ನು ಒದಗಿಸಿದ ಶ್ರೀಗಳಿಗೆ ಆಭಾರಿಯಾಗಿದ್ದೇನೆ ಎಂದು ಭಂಡಾರಿ ಹೇಳಿದರು.



إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top