ಸುರತ್ಕಲ್ : ಕ್ರಿಕೆಟ್ ಯುವ ಜನರ ಮೆಚ್ಚಿನ ಕ್ರೀಡೆಯಾಗಿದ್ದು ಅನೇಕ ಕ್ರಿಕೆಟಿಗರ ಕ್ರೀಡಾ ಬದುಕು ಪ್ರಾರಂಭಗೊಂಡದ್ದು ಅವರ ಕಾಲೇಜು ದಿನಗಳಲ್ಲಿ. ಭವಿಷ್ಯದಲ್ಲಿ ಅವರು ರಾಷ್ಟ್ರಮಟ್ಟದ ಕ್ರಿಕೆಟಿಗರಾಗಿದ್ದಾರೆ. ಗೋವಿಂದ ದಾಸ ಕಾಲೇಜು ಈ ನಿಟ್ಟಿನಲ್ಲಿ ಉತ್ತಮ ವೇದಿಕೆಯನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿಕೊಟ್ಟಿರುವುದು ಶ್ಲಾಘನೀಯ ಎಂದು ವಿದ್ಯಾದಾಯಿನೀ ಸ್ಪೋಟ್ರ್ಸ್ ಅಕಾಡೆಮಿಯ ಸಂಯೋಜಕ ಸುಬ್ರಹ್ಮಣ್ಯ ಟಿ. ನುಡಿದರು.
ಅವರು ಗೋವಿಂದ ದಾಸ ಕಾಲೇಜು ಸತತವಾಗಿ 6ನೇ ಬಾರಿ ಆಯೋಜಿಸಿರುವ ಗೋವಿಂದ ದಾಸ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ. ಕೃಷ್ಣಮೂರ್ತಿ ಮಾತನಾಡಿ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈಯಲು ವಿಫುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ಅವುಗಳ ಬಗ್ಗೆ ಗಮನಹರಿಸಬೇಕೆಂದರು. ಕಾಲೇಜಿನ ನಿಕಟಪೂರ್ವ ಉಪಪ್ರಾಂಶುಪಾಲ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ರಮೇಶ್ ಭಟ್ ಎಸ್.ಜಿ. ಶುಭ ಹಾರೈಸಿದರು.
ಅನಿಶಾಶ್ರೀ ಸ್ವಾಗತಿಸಿ ಕ್ರೀಡಾ ಕಾರ್ಯದರ್ಶಿ ಮೇಘ ವಂದಿಸಿದರು. ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪ್ರಶಾಂತ್ ಎಂ.ಡಿ. ಮತ್ತು ಉಪನ್ಯಾಸಕ ವೃಂದ ಉಪಸ್ಥಿತರಿದ್ದರು.
ಸಮಾರೋಪ ಸಮಾರಂಭ:
ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ. ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು. ಗೋವಿಂದ ದಾಸ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ರಮೇಶ್ ಕುಳಾಯಿ ವಿಜೇತರಿಗೆ ಅಭಿನಂದಿಸಿದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಹರೀಶ್ ಕುಮಾರ್, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪ್ರಶಾಂತ್ ಎಂ.ಡಿ., ಗೋವಿಂದ ದಾಸ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನಿಖಿಲ್ ಭೂಷಣ್, ಲಲಿತಕಲಾ ಸಂಘದ ಸಂಯೋಜಕ ವಿನೋದ್ ಶೆಟ್ಟಿ ಉಪಸ್ಥಿತರಿದ್ದರು.
ಕರಾವಳಿ ಕಿಂಗ್ಸ್ ತಂಡವು ಪ್ರಥಮ ಸ್ಥಾನ ಮತ್ತು ಸೀಹಾಕ್ಸ್ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಪ್ರಥಮ್ ಉತ್ತಮ ಎಸೆತಗಾರ ಪ್ರಶಸ್ತಿ, ಉತ್ತಮ ದಾಂಡಿಗ ಮತ್ತು ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ರಿತಿನ್ ಪಡೆದುಕೊಂಡರು. ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ನಿಹಾಲ್ ಪಡೆದುಕೊಂಡರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ