ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೋವಾ ಮುಡಿಗೆ 2024 ವಿಶ್ವ ಸುಂದರಿ ಕಿರೀಟ

Upayuktha
0



ಮುಂಬೈ: ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೋವಾ 2024ನೇ ಆವೃತ್ತಿಯ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಮುಂಬೈನ ಜಿಯೋ ವರ್ಲ್ಡ್ ಕನ್ವೆಷನ್ ಸೆಂಟರ್ ನಲ್ಲಿ ಶನಿವಾರ ನಡೆದ ಸ್ಪರ್ಧೆಯಲ್ಲಿ ಅವರು 71ನೇ ವಿಶ್ವಸುಂದರಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.



ಭಾರತದಿಂದ ಸ್ಪರ್ಧಿಸಿದ್ದ ಸಿನಿ ಶೆಟ್ಟಿ 8ನೇ ಸ್ಥಾನಕ್ಕೆ ತೃಪ್ತಿಪಟ್ಟುವಂತಾಯಿತು. ಮಿಸ್ ಲೆಬನಾನ್ ಯಾಸ್ಮಿನಾ ಜೈಟೌನ್ ಮೊದಲ ರನ್ನರ್ ಅಪ್ ಆದರು. ಕಳೆದ ಬಾರಿಯ ವಿಜೇತೆ ಪೋಲೆಡ್ ನ ಕರೋಲಿನಾ ಬಿಲಾವ್ಸ್ಕಾ ಅವರು ತಮ್ಮ ಉತ್ತರಾಧಿಕಾರಿ ಕ್ರಿಸ್ಟಿನಾಗೆ ವಿಶ್ವ ಸುಂದರಿ ಕಿರೀಟವನ್ನು ತೊಡಿಸಿದರು.



ಕ್ರಿಸ್ಟಿನಾ ಪಿಸ್ಕೋವಾ

ಭಾರತದಲ್ಲಿ ಫೆಬ್ರವರಿ 18 ರಿಂದ ಮಾರ್ಚ್ 9 ರವರೆಗೆ ವಿಶ್ವ ಸುಂದರಿ ಸ್ಪರ್ಧೆ!

ಅಧಿಕೃತ ವೆಬ್‌ಸೈಟ್‌ನ ಪ್ರಕಾರ, ಪಿಸ್ಕೋವಾ ಅವರು ಕಾನೂನು ಮತ್ತು ವ್ಯವಹಾರ ಆಡಳಿತದಲ್ಲಿ ಪ್ರತ್ಯೇಕ ಪದವಿಗಳನ್ನು ಪಡೆಯುತ್ತಿದ್ದಾರೆ. 20ರ ಹರೆಯದಲ್ಲಿರುವ ಪಿಸ್ಕೋವಾ ಅವರು ಕ್ರಿಸ್ಟಿನಾ ಪಿಸ್ಕೊ ​​ಫೌಂಡೇಶನ್‌ನ ಸಂಸ್ಥಾಪಕಿಯೂ ಹೌದು. ಇಂಗ್ಲಿಷ್, ಪೋಲಿಷ್, ಸ್ಲೋವಾಕ್ ಮತ್ತು ಜರ್ಮನ್ ಭಾಷೆಗಳಲ್ಲಿ ನಿರರ್ಗಳವಾಗಿರುವ ಮಾಡೆಲ್, ಶಿಕ್ಷಣದ ಮೂಲಕ ಸುಸ್ಥಿರ ಅಭಿವೃದ್ಧಿಗಾಗಿ ಪ್ರತಿಪಾದಕರಾಗಿದ್ದಾರೆ.



28 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಸ್ಪರ್ಧೆ ಆಯೋಜಿಸಿತ್ತು. ಭಾರತ ಇದುವರೆಗೆ 6 ವಿಶ್ವ ಸುಂದರಿ ಪಟ್ಟ ಗಳಿಸಿದೆ. ಮೊದಲ ಬಾರಿಗೆ ಮೊದಲ ಬಾರಿಗೆ ರೀಟಾ ಫರಿಯಾ 1966ರಲ್ಲಿ ವಿಶ್ವ ಸುಂದರಿಯಾಗಿ ಆಯ್ಕೆಯಾಗಿದ್ದರು. ನಂತರ ಐಶ್ವರ್ಯಾ ರೈ ಬಚ್ಚನ್‌ (1994), ಡಯಾನಾ ಹೇಡನ್ (1997), ಯುಕ್ತಾ ಮುಖಿ (1999), ಪ್ರಿಯಾಂಕಾ ಚೋಪ್ರಾ (2000) ಮತ್ತು ಇತ್ತೀಚೆಗೆ ಮಾನುಷಿ ಚಿಲ್ಲರ್ (2017) ವಿಶ್ವ ಸುಂದರಿ ಪಟ್ಟವನ್ನು ಅಲಂಕರಿಸಿದ್ದಾರೆ.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top