ಮನೋಹರ ಪ್ರಸಾದ ನಿಧನಕ್ಕೆ ದ.ಕ. ಜಿಲ್ಲಾ ಕಸಾಪ ಸಂತಾಪ

Upayuktha
0


ಮಂಗಳೂರು: ಹಿರಿಯ ಪತ್ರಕರ್ತ, ಕಥೆಗಾರ, ನಟ, ರಂಗಭೂಮಿ ಕಲಾವಿದ, ಮೂರು ದಶಕಗಳಿಗಿಂತಲೂ ಹೆಚ್ಚು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ ಬಹುಮುಖ ವ್ಯಕ್ತಿತ್ವ. ಮನೋಹರ ಪ್ರಸಾದ್ ಅವರ ನಿರೂಪಣೆ ಶೈಲಿ ಮತ್ತು ಸಂಶೋಧನ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಸ್ಮರಣೀಯ. ಮನೋಹರ ಪ್ರಸಾದರ ನಿಧನ ಅತೀವ ದುಃಖ ತಂದಿದೆ. ಮೃತರ ಆತ್ಮಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚಿರಶಾಂತಿ ಕೋರುತ್ತದೆ. ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ತನ್ನ ಸಂದೇಶದಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
To Top