ಕೆ.ಯೂ.ಡಬ್ಲ್ಯೂ.ಜೆ. ಕಚೇರಿಯಲ್ಲಿ ಡಿ.ವಿ.ಜಿ. ಜಯಂತ್ಯೋತ್ಸವ ಆಚರಣೆ
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಸ್ಥಾಪಕ ಅಧ್ಯಕ್ಷರೂ, ಕನ್ನಡದ ಹಿರಿಯ ಪತ್ರಕರ್ತರೂ ಆಗಿದ್ದ ಡಿ.ವಿ.ಜಿ.ಯವರು ಸಾಮಾಜಿಕ ಚಿಂತನೆಗಳ ಮೂಲಕ ಪತ್ರಿಕೋದ್ಯಮದಲ್ಲಿ ತನ್ನದೇ ಆದ ಛಾಪು ಮೂಡಿಸಿದವರು ಎಂದು ಹಿರಿಯ ಪತ್ರಕರ್ತರಾದ ಡಾ. ಈಶ್ವರ ದೈತೋಟ ಅಭಿಪ್ರಾಯಪಟ್ಟರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡ ಡಿ.ವಿ.ಜಿ. ಜಯಂತ್ಯೋತ್ಸವದ ಆಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇಂದಿನ ಪತ್ರಿಕೋದ್ಯಮ ವಿದ್ಯಾರ್ಥಿಗಳೂ ಸೇರಿದಂತೆ ಪತ್ರಕರ್ತರು ಡಿ.ವಿ.ಜಿ.ಯವರ ಆದರ್ಶವನ್ನು ಪಾಲಿಸುವುದು ಮುಖ್ಯ, ಆ ನಿಟ್ಟಿನಲ್ಲಿ ಡಿ.ವಿ.ಜಿ.ಯವರ ಕುರಿತಂತೆ ಕೃತಿ ಪ್ರಕಟಗೊಂಡರೆ, ಅದು ಪತ್ರಿಕೋದ್ಯಮ ಕ್ಷೇತ್ರಕ್ಕೆ ಉಪಯುಕ್ತ ಗ್ರಂಥವಾಗಲಿದೆ ಎಂದೂ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಡಿ.ವಿ.ಜಿ.ಯವರು ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ ಮತ್ತು ಪತ್ರಕರ್ತರಾಗಿಯೂ ಸಲ್ಲಿಸಿದ ಸೇವೆ ಪತ್ರಕರ್ತರೆಲ್ಲರಿಗೂ ಅನುಕರಣೀಯ ಎಂದರು.
ರಾಜ್ಯ ಸಂಘದ ಖಜಾಂಚಿ ವಾಸುದೇವ ಹೊಳ್ಳ ಮಾತನಾಡಿ, ಡಿ.ವಿ.ಜಿ.ಯವರ ಜೀವಿತಕಾಲದಲ್ಲಿ ಒಡನಾಟ ಇಟ್ಟುಕೊಂಡಿದ್ದ ಈಶ್ವರ ದೈತೋಟರವರು ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ನಿಜಕ್ಕೂ ಸಂತೋಷ ಎಂದರು.
ಕಾರ್ಯಕ್ರಮದ ಆರಂಭದಲ್ಲಿ ಬೆಂಗಳೂರು ನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್ ಸಭೆಗೆ ಆಗಮಿಸಿದವರಿಗೆ ಸ್ವಾಗತ ಬಯಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ