ಚಿತ್ರ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಉಜಿರೆ: ಮಂಗಳೂರಿನಲ್ಲಿ ಪುರಭವನದಲ್ಲಿ ಮಾ.23 ಮತ್ತು 24 ರಂದು ನಡೆಯಲಿರುವ ದ.ಕ. ಜಿಲ್ಲಾ 26ನೆ ಕನ್ನಡ ಸಾಹಿತ್ಯಸಮ್ಮೇಳನದ ಆಮಂತ್ರಣಪತ್ರವನ್ನು ಗುರುವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಶ್ರೀನಾಥ್, ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ನಾಗಣ್ಣ, ಡಿ.ಎ., ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ, ನಿವೃತ್ತ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ, ಡಾ. ರಾಜಶೇಖರ್ ಹಳೇಮನೆ, ಉಜಿರೆ ಗ್ರಾಮ ಪಂಚಾಯತಿ ಅಧ್ಯರಾದ ಉಷಾ ಕಿರಣ್ ಕಾರಂತ್, ಅರವಿಂದ ಕಾರಂತ್ ಮೊದಲಾದವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ