ಮಂಗಳೂರು: ಬಜರಂಗದಳ ಪ್ರಾಂತ ಸಹ ಸಂಯೋಜಕರಾದ ಮುರಳಿಕೃಷ್ಣ ಹಸಂತಡ್ಕರವರನ್ನು ಕುಣಿಗಲ್ ನಲ್ಲಿ ಪೊಲೀಸರು ಬಂಧಿಸಿ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ತಡೆದಿರುವುದನ್ನು ದ.ಕ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರಕಾರದ ಕ್ರಮವನ್ನು ಖಂಡಿಸಿದರು. ಕರ್ನಾಟಕದಲ್ಲಿ ನಡೆದ ಬಾಂಬ್ ದಾಳಿ ಭಯೋತ್ಪಾದಕ ಕೃತ್ಯಗಳನ್ನು ಖಂಡಿಸಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ತುಮಕೂರಿನಲ್ಲಿ ನಡೆಯಲಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಬಜರಂಗದಳ ಪ್ರಾಂತ ಸಹ ಸಂಯೋಜಕರಾದ ಮುರಳಿಕೃಷ್ಣ ಹಸಂತಡ್ಕರವರನ್ನು ಕುಣಿಗಲ್ ನಲ್ಲಿ ಪೊಲೀಸರು ಬಂಧಿಸಿ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ತಡೆದಿದ್ದಾರೆ ಎಂದು ಅವರು ಆರೋಪಿಸಿದರು.
ಕಾಂಗ್ರೆಸ್ ಸರಕಾರವು ಪೊಲೀಸ್ ಇಲಾಖೆಯ ಮುಖಾಂತರ ದೇಶಭಕ್ತ ಹಿಂದೂ ಮುಖಂಡರನ್ನು ಬಂಧಿಸಿ, ಪರೋಕ್ಷವಾಗಿ ದೇಶದ್ರೋಹಿಗಳ ಪರ ನಿಲ್ಲುವಂತಹ ಕೆಲಸ ಮಾಡುತ್ತಿದೆ. ಇಷ್ಟೇ ಅಲ್ಲದೇ ಕಲಬುರ್ಗಿಯಲ್ಲಿ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆಯವರನ್ನು ಜಿಲ್ಲೆ ಪ್ರವೇಶಿಸದಂತೆ ತೆಡೆದಿದ್ದು, ಆ ನಂತರ ಈ ಪ್ರಕರಣದಲ್ಲಿ ಹೈಕೋರ್ಟಿನಿಂದ ಉಗಿಸಿಕೊಂಡರೂ ಬುದ್ದಿ ಕಲಿತುಕೊಳ್ಳದ ಕರ್ನಾಟಕದ ಕಾಂಗ್ರೆಸ್ ಸರಕಾರ ವ್ಯಕ್ತಿಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿಯುವ ಮೂಲಕ ಸಂವಿಧಾನ ವಿರೋಧಿಯಾಗಿ ಸರಕಾರ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಈ ನಡೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಅವರು ಹೇಳಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ