ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಭಾನುವಾರ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿಯನ್ನು ಉದ್ಘಾಟಿಸಿದರು.
ಉಜಿರೆ: ಧರ್ಮಸ್ಥಳದಲ್ಲಿ 2024ರ ಮೇ ಒಂದರಂದು ಬುಧವಾರ ಸಂಜೆ ಗಂಟೆ 6.45ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಬಳಿ ಇರುವ ಪ್ರವಚನ ಮಂಟಪದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಅವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಭಾನುವಾರ ಉದ್ಘಾಟಿಸಿ ಶುಭ ಹಾರೈಸಿದರು.
ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ದೇವಳದ ಪಾರುಪತ್ಯಗಾರ್ ಲಕ್ಷ್ಮಿನಾರಾಯಣ ರಾವ್, ನಿವೃತ್ತ ಮುಖ್ಯೋಪಾಧ್ಯಾಯ ಧರ್ಣಪ್ಪ ಮೊದಲಾದವರು ಉಪಸ್ಥಿತರಿದ್ದರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644, ವಾಟ್ಸಪ್ ನಂ. 9663464648, 8147263422
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ