ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜಿನಲ್ಲಿ ಪ್ರಸ್ತುತ ಅಧ್ಯಯನ ಮಾಡುತ್ತಿರುವ ಆಹ೯ ಬಡ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ನೀಡುವ ಉಚಿತ ಭೇೂಜನ ನಿಧಿಗೆ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ರೂಪಾಯಿ 25ಸಾವಿರವನ್ನು ಹಸ್ತಾಂತರಿಸುವ ಕಾರ್ಯಕ್ರಮ ಕಾಲೇಜಿನ ಮಿನಿ ಸಭಾಂಗಣದಲ್ಲಿ ನಡೆಯಿತು.ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ ದೇಣಿಗೆ ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದರು.
ವೇದಿಕೆಯಲ್ಲಿ ಎಂಜಿ ಎಂ.ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ.ಕೊಕ್ಕಣೆ೯ ಸುರೇಂದ್ರನಾಥ ಶೆಟ್ಟಿ, ಪ್ರಧಾನ ಕಾರ್ಯದಶಿ೯ ಡಾ.ಎಂ.ವಿಶ್ವ ನಾಥ ಪೈ, ಕೇೂಶಾಧಿಕಾರಿ ದೀಪಾಲಿ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ