'ಚಂಪಕಧಾಮ ಸ್ವಾಮಿ ದೇವಸ್ಥಾನದ ಜಾತ್ರೆಯಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ಬೇಡ'

Chandrashekhara Kulamarva
0

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದಿಂದ ದೇವಸ್ಥಾನ ನಿರ್ವಹಣಾಧಿಕಾರಿಗಳಿಗೆ ಮನವಿ



ಬೆಂಗಳೂರು: ದೇವಸ್ಥಾನಗಳ ಪಾವಿತ್ರ್ಯವನ್ನು ಕಾಪಾಡುವ ದೃಷ್ಟಿಯಿಂದ ಬನ್ನೇರುಘಟ್ಟ ರಸ್ತೆಯ ಶ್ರೀ ಚಂಪಕಧಾಮ  ಸ್ವಾಮಿ ದೇವಸ್ಥಾನದ ಜಾತ್ರೆಯ ಸಂದರ್ಭದಲ್ಲಿ ಹಿಂದೂಯೇತರರ ಅಂಗಡಿ-ಮುಂಗಟ್ಟುಗಳಿಗೆ ಅನುಮತಿ ನೀಡಬಾರದು ಎಂದು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ದೇವಸ್ಥಾನದ ಆಡಳಿತ ಮಂಡಳಿಯ  ಪಾರುಪತ್ತೆದಾರರಾದ  ಶಿವಕುಮಾರ್  ಇವರಿಗೆ ಮನವಿಯನ್ನು ನೀಡಲಾಯಿತು.ಈ ಸಂದರ್ಭದಲ್ಲಿ ಪ್ರಕಾಶ್ ರಾವ್, ತ್ಯಾಗರಾಜ್, ಬಂಗಾರಪ್ಪ, ಶ್ರೀನಿವಾಸ್,  ಸುಬ್ರಹ್ಮಣ್ಯ ಎಸ್. ಭಟ್, ಮನೋಜ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.


ಹಿಂದೂ ದೇವಸ್ಥಾನಗಳು ಹಿಂದೂ ಧರ್ಮದ ಅತ್ಯಂತ ಪವಿತ್ರವಾದ ಶ್ರದ್ಧಾ ಕೇಂದ್ರವಾಗಿದೆ ಮತ್ತು ದೇವಸ್ಥಾನಗಳಿಗೆ ಅದರದ್ದೇ ಆದಂತಹ ವಿಶೇಷವಾದ ಆಧ್ಯಾತ್ಮಿಕ, ಧಾರ್ಮಿಕ ಮತ್ತು ಐತಿಹಾಸಿಕ ಹಿನ್ನೆಲೆ ಮತ್ತು ಮಹತ್ತ್ವವಿದೆ. ಮುಂದಿನ ತಿಂಗಳು ಈ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದ್ದು ಈ ಸಂದರ್ಭದಲ್ಲಿ ದೇವರ ಮೇಲೆ ನಂಬಿಕೆ ಇಲ್ಲದ ಅನ್ಯ ಸಮುದಾಯದವರು,  ನಾಸ್ತಿಕರು ದೇವಸ್ಥಾನದ ಪ್ರಾಂಗಣ, ಪರಿಸರದಲ್ಲಿ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆಯಾಗುವ ರೀತಿಯಲ್ಲಿ ವ್ಯಾಪಾರ ಮಾಡುವುದು ಗಮನಕ್ಕೆ ಬಂದಿರುವುದರಿಂದ ದೇವಸ್ಥಾನದ  ಪಾವಿತ್ರ್ಯವನ್ನು ಕಾಪಾಡಲು ದೇವಸ್ಥಾನದ ಪರಿಸರದಲ್ಲಿ ಯಾವುದೇ ಕಾರಣಕ್ಕೂ ಹಿಂದೂಯೇತರರಿಗೆ ಅಂಗಡಿ ಮುಂಗಟ್ಟುಗಳನ್ನು ಹಾಕಲು ಅವಕಾಶ ನೀಡಬಾರದು' ಎಂದು ಮನವಿಯನ್ನು ಮಾಡಲಾಯಿತು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top