ಪಣಜಿ: ಗೋವಾದಲ್ಲಿ ಕನ್ನಡಿಗರು ನೆಲೆಸಿರುವ ಜೋಪಡಿ ಮತ್ತು ಸ್ಲಂ ಏರಿಯಾಗಳಿಗೆ ತೆರಳಿ ಪ್ರಸಕ್ತ ಲೋಕಸಭಾ ಚುನಾವಣೆಯ ಬಗ್ಗೆ ಆ ಕನ್ನಡಿಗರಲ್ಲಿ ಅರಿವು ಮೂಡಿಸುವುದು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ವಿವಿಧ ಯೋಜನೆಗಳ ಕುರಿತು, ಚುನಾವಣಾ ಪ್ರಣಾಳಿಕೆಯ ಕುರಿತು ಕನ್ನಡಿಗ ಮತದಾರರಲ್ಲಿ ಮಾಹಿತಿ ನೀಡುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ನಮ್ಮನ್ನು ದೆಹಲಿಯಿಂದ ನಮ್ಮನ್ನು ವಿಶೇಷ ಸಮೀತಿಗೆ ಆಯ್ಕೆ ಮಾಡಿದ್ದಾರೆ ಎಂದು ಗೋವಾ ಬಿಜೆಪಿ ಕರ್ನಾಟಕ ಸೆಲ್ ಕನ್ವೀನರ್ ಮುರಳಿ ಮೋಹನ್ ಶೆಟ್ಟಿ ಮಾಹಿತಿ ನೀಡಿದರು.
ಪಣಜಿಯಲ್ಲಿ ಬಿಜೆಪಿ ಗೋವಾ ಕರ್ನಾಟಕ ಸೆಲ್‍ನ ವತಿಯಿಂದ ಸಮಿತಿಯ ವಿಶೇಷ ಸಭೆಯಲ್ಲಿ ಉಪಸ್ಥಿತರಿದ್ದು ಅವರು ಮಾತನಾಡಿದರು. ಗೋವಾದಲ್ಲಿರುವ ಕನ್ನಡಿಗರಲ್ಲಿ ಜಾಗೃತಿ ಮೂಡಿಸಿ ಬಿಜೆಪಿಗೆ ಹೆಚ್ಚು ಮತ ಲಭಿಸುವಂತೆ ಮಾಡುವುದು ನಮ್ಮ ಕೆಲಸ. ಮೋದಿ ಸರ್ಕಾರದ ಯೋಜನೆಗಳು ಜನತೆಗೆ ತಲುಪಿತ್ತೇ..? ಪ್ರಸಕ್ತ ಚುನಾವಣೆಯ ನಂತರ ಮೋದಿ ನೇತೃತ್ವದ ಸರ್ಕಾರದ ಯೋಜನೆಗಳು, ಈ ಕುರಿತು ಕನ್ನಡಿಗರಿಗೆ ಮಾಹಿತಿ ನೀಡುವುದು ನಮ್ಮ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಗೋವಾ ಬಿಜೆಪಿ ಕರ್ನಾಟಕ ಸೆಲ್ ಕಾರ್ಯ ನಿರ್ವಹಿಸಲಿದೆ. ಕಾಂಗ್ರೇಸ್ ಸರ್ಕಾರದ ಅಧಿಕಾರಾವಧಿಯಲ್ಲಿ ಯೋಜನೆಗಳ ಹಣ ಜನತೆಗೆ ತಲುಪುತ್ತಿರಲಿಲ್ಲ, ಬದಲಾಗಿ ಕಾಂಗ್ರೇಸ್ ನವರ ಬಾಯಿಗೆ ಹೋಗುತ್ತಿತ್ತು. ಈ ಎಲ್ಲ ಮಾಹಿತಿಯನ್ನು ಕನ್ನಡಿಗ ಮತದಾರರ ಬಳಿ ತಲುಪಿಸಲಿದ್ದೇವೆ ಎಂದು ಮುರಳಿ ಮೋಹನ್ ಶೆಟ್ಟಿ ನುಡಿದರು.
ಗೋವಾದ ಮೂಲೆ ಮೂಲೆಯಲ್ಲಿರುವ ಕನ್ನಡಿಗ ಮತದಾರರನ್ನು ನಾವು ನಮ್ಮ ರಾಜ್ಯ ಬಿಜೆಪಿ ನಾಯಕರೊಂದಿಗೆ ತೆರಳಿ ಕನ್ನಡಿಗರನ್ನು ಒಗ್ಗೂಡಿಸಿ ಸಭೆ ನಡೆಸಿ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡುವಂತೆ ಜನರಲ್ಲಿ ಮನವಿ ಮಾಡಲಿದ್ದೇವೆ. ಈ ಎಲ್ಲ ವಿಷಯಗಳ ಕುರಿತು ಸವಿಸ್ತಾರ ಚರ್ಚೆ ನಡೆಸಲು ಈ ವಿಶೇಷ ಸಭೆ ನಡೆಸಲಾಯಿತು ಎಂದು ಗೋವಾ ಬಿಜೆಪಿ ಕರ್ನಾಟಕ ಸೆಲ್ ಕನ್ವೀನರ್ ಮುರಳಿ ಮೋಹನ್ ಶೆಟ್ಟಿ ನುಡಿದರು.
ಈ ಸಭೆಯಲ್ಲಿ ಬಿಜೆಪಿ ಸೆಲ್ ದಕ್ಷಿಣ ಗೋವಾ ಕಾರ್ಯದರ್ಶಿ ರಾಜೇಶ್ ಶೆಟ್ಟಿ, ರಾಘವ ಶೆಟ್ಟಿ, ಅರುಣಕುಮಾರ್, ಶಿವಾನಂದ ಬಿಂಗಿ ಸೇರಿದಂತೆ ಬಿಜೆಪಿ ಕರ್ನಾಟಕ ಸೆಲ್ ಪದಾಧಿಕಾರಿಗಳು ಉಪಸ್ಥಿತರಿದ್ದು ಚರ್ಚೆ ನಡೆಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ