ಸುರತ್ಕಲ್: ಅಧ್ಯಯನ ಮತ್ತು ಅಧ್ಯಾಪನ ಸಮ್ಮಿಲನಗೊಂಡಾಗ ಅಧ್ಯಾಪಕ ವೃತ್ತಿ ಸಾರ್ಥಕವಾಗುತ್ತದೆ ಎಂದು ಹಿಂದೂ ವಿದ್ಯಾದಾಯಿನೀ ಸಂಘದ ಕಾರ್ಯದರ್ಶಿ ಶ್ರೀರಂಗ ಹೆಚ್. ನುಡಿದರು. ಅವರು ಗೋವಿಂದ ದಾಸ ಕಾಲೇಜಿನ ಮಾನವಿಕ ಸಂಘ, ಇತಿಹಾಸ ವಿಭಾಗ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಇತಿಹಾಸ ಅಧ್ಯಾಪಕರ ಸಂಘ (ಮಾನುಷ)ಗಳ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಗಾರ ರಾಷ್ಟ್ರೀಯ ಶಿಕ್ಷಣ ನೀತಿ – 2020ರಲ್ಲಿ ಇತಿಹಾಸ ಪಠ್ಯಕ್ರಮಗಳ ಅವಲೋಕನವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾದ ಮಂಗಳೂರು ವಿ.ವಿವಿ ಇತಿಹಾಸ ಅಧ್ಯಾಪಕರ ಸಂಘದ ಅಧ್ಯಕ್ಷ ಡಾ. ಜಯರಾಮ್ ಶೆಟ್ಟಿಗಾರ್ ಮಾತನಾಡಿ ಹೊಸ ಶಿಕ್ಷಣ ನೀತಿಯು ಇತಿಹಾಸ ಪಠ್ಯಕ್ರಮದಲ್ಲಿ ಬಹಳಷ್ಟು ಬದಲಾವಣೆಗಳನ್ನು ತರಲಾಗಿದ್ದು ಈ ದೇಶದ ಸಂಸ್ಕೃತಿ ಮತ್ತು ನಾಡನುಡಿಯ ಅಧ್ಯಯನಕ್ಕೆ ಹೆಚ್ಚು ಮಹತ್ವ ನೀಡಲಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ. ಕೃಷ್ಣಮೂರ್ತಿ ಮಾತನಾಡಿ ಪಠ್ಯಕ್ರಮದಲ್ಲಿ ಹೊಸ ವಿಚಾರಗಳನ್ನು ಇತ್ತೀಚಿನ ಸಂಶೋಧನೆಯ ಬೆಳವಣಿಗೆಗಳನ್ನು ಅಳವಡಿಸಿಕೊಂಡಾಗ ಅದು ವಿದ್ಯಾರ್ಥಿಗಳಲ್ಲಿ ಹೆಚ್ಚು ಆಸಕ್ತಿ ಮೂಡಿಸುತ್ತದೆ ಎಂದರು.
ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ರಮೇಶ್ ಕುಳಾಯಿ, ಅಮುಕ್ತ ಅಧ್ಯಕ್ಷ ಪ್ರೊ. ಗಣೇಶ್ ಪೈ, ಮಾನುಷದ ಕಾರ್ಯದರ್ಶಿ ಡಾ. ನವೀನ್ ಕೊಣಾಜೆ, ಪಿ., ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಡಾ. ರಾಘವ, ಇತಿಹಾಸ ವಿಭಾಗದ ಉಪನ್ಯಾಸಕಿ ರಶ್ಮಿ ಕಾಯರ್‌ಮಾರ್ ಉಪಸ್ಥಿತರಿದ್ದರು. ಡಾ. ವಿಜಯಲಕ್ಷಿö್ಮ ಸ್ವಾಗತಿಸಿದರು ಕ್ಯಾಪ್ಟನ್. ಡಾ. ಸುಧಾ ಯು. ನಿರೂಪಿಸಿದರು. ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕ ಹರೀಶ ಆಚಾರ್ಯ ಪಿ. ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ