ಸುರತ್ಕಲ್: ಶಿಕ್ಷಕರಿಗೆ ಭಾರತೀಯ ಪರಂಪರೆಯಲ್ಲಿ ಶ್ರೇಷ್ಠ ಸ್ಥಾನವಿದ್ದು ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಜೀವನದ ಉನ್ನತ ಮೌಲ್ಯಗಳನ್ನು ಕಲಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದ್ದಾಗಿದೆ. ವಿದ್ಯಾರ್ಥಿಗಳ ಪ್ರೀತಿ, ಗೌರವಗಳನ್ನು ಸಂಪಾದಿಸುವವರೇ ಶ್ರೇಷ್ಠ ಶಿಕ್ಷಕರಾಗಿರುತ್ತಾರೆ ಎಂದು ಸುರತ್ಕಲ್ ಹಿಂದೂ ವಿದ್ಯಾದಾಯಿನೀ ಸಂಘದ ಅಧ್ಯಕ್ಷ ಹೆಚ್. ಜಯಚಂದ್ರ ಹತ್ವಾರ್ ನುಡಿದರು.
ಅವರು ಗೋವಿಂದ ದಾಸ ಕಾಲೇಜಿನ ಸ್ಟಾಫ್ ಅಸೋಸಿಯೇಶನ್ ವತಿಯಿಂದ ನಡೆದ ಸೇವಾ ನಿವೃತ್ತಿ ಹೊಂದಿದ ಕಾಲೇಜಿನ ಉಪಪ್ರಾಂಶುಪಾಲ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ರಮೇಶ್ ಭಟ್ ಎಸ್.ಜಿ. ಅವರ ಬೀಳ್ಕೊಡುಗೆ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಹಿಂದೂ ವಿದ್ಯಾದಾಯಿನೀ ಸಂಘದ ಕಾರ್ಯದರ್ಶಿ ಶ್ರೀರಂಗ ಹೆಚ್. ಮಾತನಾಡಿ ಪ್ರೊ. ರಮೇಶ್ ಭಟ್ ಎಸ್.ಜಿ ಅವರು ಹಲವಾರು ಸಮಾಜಮುಖಿ ಕೆಲಸಗಳಲ್ಲೂ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು.
ಆಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಕೃಷ್ಣಮೂರ್ತಿ ಪಿ. ಅವರು ಪ್ರೊ. ರಮೇಶ್ ಭಟ್ ಅವರ ಮಾರ್ಗದರ್ಶನದಲ್ಲಿ ಲಲಿತಕಲಾ ಸಂಘವು ಅತ್ಯುತ್ತಮ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಪ್ರಸಿದ್ಧಿಗಳಿಸಿದೆ ಎಂದರು.
ಕಾಲೇಜಿನ ಆಡಳಿತಾತ್ಮಕ ನಿರ್ದೇಶಕರಾದ ಪ್ರೊ. ರಮೇಶ್ ಕುಳಾಯಿ, ಪ್ರಾಧ್ಯಾಪಕರಾದ ಪ್ರೊ. ನೀಲಪ್ಪ ವಿ., ಪ್ರೊ. ಹರೀಶ ಆಚಾರ್ಯ ಪಿ., ಲಲಿತಕಲಾ ಸಂಘದ ಸಂಯೋಜಕ ವಿನೋದ್ ಶೆಟ್ಟಿ, ಕಛೇರಿ ಅಧೀಕ್ಷಕ ವೆಂಕಪ್ಪ ಮೂಲ್ಯ ಒಡನಾಟದ ನೆನಪುಗಳನ್ನು ಹಂಚಿಕೊಂಡರು.
ಸ್ಟಾಫ್ ಅಸೋಸಿಯೇಶನ್ ನ ಕಾರ್ಯದರ್ಶಿ ಗೀತಾ ಕೆ. ಸ್ವಾಗತಿಸಿದರು. ಉಪನ್ಯಾಸಕಿ ಡಾ. ವಿಜಯಲಕ್ಷ್ಮೀ ವಂದಿಸಿದರು. ಕನ್ನಡ ಉಪನ್ಯಾಸಕರಾದ ಡಾ. ಸಂತೋಷ್ ಆಳ್ವ ಮತ್ತು ಅಕ್ಷತಾ ವಿ. ಕಾರ್ಯಕ್ರಮ ನಿರೂಪಿಸಿದರು. ಸಾವಿತ್ರಿ ರಮೇಶ್ ಭಟ್, ಶ್ರೀಕುಮಾರ್, ಉಪನ್ಯಾಸಕ ಪ್ರೊ. ವಾಮನ ಕಾಮತ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ