ಪುರದ ಪುಣ್ಯಂ ಪುರುಷ ರೂಪಿಂದೆ ಪೋಗುತಿದೆ ಕೃತಿಯ ಕುರಿತು
ಹಾಸನ: ಹಾಸನದಲ್ಲಿ ನಿರಂತರವಾಗಿ ನಡೆದುಬಂದಿರುವ ಮನೆ ಮನೆ ಕವಿಗೋಷ್ಠಿಯ 316 ತಿಂಗಳ ಕಾರ್ಯಕ್ರಮವು ಹಾಸನ ನಗರ ಸಂಗಮೇಶ್ವರ ಬಡಾವಣೆ, 2ನೇ ಹಂತ, ಜವೇನಹಳ್ಳಿ ಕೆರೆ ಪಕ್ಕ ಇಲ್ಲಿನ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಆವರಣದಲ್ಲಿ 2023 ಏಪ್ರಿಲ್ 7ರ ಭಾನುವಾರ ಮದ್ಯಾಹ್ನ 3.30 ಗಂಟೆಗೆ ಅರಕಲಗೊಡು ತಾ. ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರು ಉಡುವೇರೆ ಡಿ. ಸುಂದರೇಶ್ ಇವರ ಪ್ರಾಯೋಜಕತ್ವದಲ್ಲಿ ನಡೆಯಲ್ಲಿದೆ.
ಸಾಹಿತಿ ಎನ್.ಎಲ್.ಚನ್ನೇಗೌಡರ ಇತ್ತೀಚಿನ ಕೃತಿ ಪುರದ ಪುಣ್ಯಂ ಪುರುಷರೂಪಿಂದೆ ಪೋಗುತ್ತಿದೆ ಪುಸ್ತಕ ಕುರಿತ್ತಾಗಿ ಲೇಖಕ ಸುಂದರೇಶ್ ಮಾತನಾಡುವರು. ಕಾರ್ಯಕ್ರಮದಲ್ಲಿ ಶಿವಪಾರ್ವತಿ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಾಲಯ ಟ್ರಸ್ಟ್ ಅಧ್ಯಕ್ಷರು ಬಸಪ್ಪರವರು, ಹಾಸನಾಂಬ ಲಯನ್ಸ್ ಕ್ಲಬ್ ಜಿಲ್ಲಾ ಖಜಾಂಚಿ ತಿಮ್ಮರಾಯಿಶಟ್ಟಿ ಇವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಆಗಮಿತ ಕವಿಗಳಿಂದ ಕವಿಗೋಷ್ಠಿ ಮತ್ತು ಗಾಯಕರಿಂದ ಗಾಯನ ಕಾರ್ಯಕ್ರಮ ಇರುವುದು. ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಸಕ್ತರು, ಕವಿಗಳು, ಗಾಯಕರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿಕೊಡಬೇಕೆಂದು ಸಂಚಾಲಕರು ಹಾಗೂ ಸಾಹಿತಿ ಗೊರೂರು ಅನಂತರಾಜು ಕೋರಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ