ಹಾವೇರಿ : ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳ ಬದಲಾವಣೆ? ಶೆಟ್ಟರ್- ಪಾಟೀಲ್ ಮುಖಾಮುಖಿ

Upayuktha
0

 



ಬೆಂಗಳೂರು: ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಈಗಾಗಲೇ ಹೆಸರು ಘೋಷಣೆಯಾಗಿದ್ದರೂ ಅಭ್ಯರ್ಥಿಗಳಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದ ಬೆನ್ನಲ್ಲೇ ಸಚಿವ ಎಚ್.ಕೆ.ಪಾಟೀಲ್ ಅವರನ್ನು ಇಲ್ಲಿಂದ ಸ್ಪರ್ಧಿಸುವಂತೆ ಮನವೊಲಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಆದರೆ ಬೊಮ್ಮಾಯಿ ಅವರ ಬದಲಿಗೆ ಜಗದೀಶ್ ಶೆಟ್ಟರ್ ಅವರನ್ನು ಹಾವೇರಿಯಿಂದ ಸ್ಪರ್ಧಿಸುವಂತೆ ಒತ್ತಡ ಹೇರಲಾಗುತ್ತಿದೆ ಎಂಬ ಮಾತು ಕೂಡ ಕೇಳಿ ಬರುತ್ತಿದೆ. ಆದರೆ ಸ್ಥಳೀಯ ನಾಯಕರಿಗೆ ಈ ಬಗ್ಗೆ ಅಧಿಕೃತ ಮಾಹಿತಿ ಇಲ್ಲ.



ಶೆಟ್ಟರ್ ಅವರು ಬೆಳಗಾವಿ ಕ್ಷೇತ್ರ ಬಯಸುತ್ತಿದ್ದಾರೆ, ಆದರೆ ಇತ್ತೀಚಿನ ಬೆಳವಣಿಗೆಗಳು ಬಿಜೆಪಿ ನಾಯಕರು ತಮ್ಮ ಕಾರ್ಯತಂತ್ರವನ್ನು ಪುನರ್ವಿಮರ್ಶಿಸುವಂತೆ ಮಾಡಿದೆ. ಬೆಳಗಾವಿಯ ಕೆಲವು ಸ್ಥಳೀಯ ಪಕ್ಷದ ಮುಖಂಡರು “ಗೋ ಬ್ಯಾಕ್ ಶೆಟ್ಟರ್” ಅಭಿಯಾನ ಪ್ರಾರಂಭಿಸಿದ್ದಾರೆ ಮತ್ತು ನಗರದ ಕೆಲವು ಪ್ರಮುಖ ರಸ್ತೆಗಳಲ್ಲಿ ಬ್ಯಾನರ್‌ ಹಾಕಿದ್ದಾರೆ. ಹಾವೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಆದರೆ ಬೊಮ್ಮಾಯಿ ವಿರುದ್ಧ ಪ್ರಬಲ ಸ್ಪರ್ಧಿಯಾಗಲು ಸಾಧ್ಯವಿಲ್ಲ ಎಂದು ಪಕ್ಷದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಹಾಗಾಗಿಯೇ ಎಚ್ ಕೆ ಪಾಟೀಲ್ ಅವರನ್ನು ಕಣಕ್ಕಿಳಿಸಲು ಮನವೊಲಿಸಲಾತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.



ಎರಡೂ ಪಕ್ಷಗಳು ಜಾತಿ ಸಮೀಕರಣಗಳನ್ನು ರೂಪಿಸಿ ಎಲ್ಲಾ ತಾಲ್ಲೂಕುಗಳಿಂದ ಸಮೀಕ್ಷೆ ವರದಿಗಳನ್ನು ಸಂಗ್ರಹಿಸುತ್ತಿವೆ. ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಪಕ್ಷದ ಶಾಸಕರ ಸಂಖ್ಯೆ ಹೆಚ್ಚು ಇರುವುದರಿಂದ ಈ ಬಾರಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸದಲ್ಲಿದೆ. ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುವುದಾಗಿ ಶಾಸಕರು ಪಕ್ಷದ ವರಿಷ್ಠರಿಗೆ ಭರವಸೆ ನೀಡಿದ್ದಾರೆ. ಬಿಜೆಪಿ ಭದ್ರಕೋಟೆಯಾಗಿರುವ ಹಾವೇರಿ ಕ್ಷೇತ್ರದಲ್ಲಿ 6.5 ಲಕ್ಷಕ್ಕೂ ಅಧಿಕ ಲಿಂಗಾಯತರು, ಮೂರು ಲಕ್ಷ ಅಲ್ಪಸಂಖ್ಯಾತರು, ಮೂರು ಲಕ್ಷ ಕುರುಬರು, ಮೂರು ಲಕ್ಷ ಮುಸ್ಲಿಮರು ಹಾಗೂ ಇತರರಿದ್ದಾರೆ. 



ಜನರು ಬೊಮ್ಮಾಯಿಗೆ ಮತ ಹಾಕುತ್ತಾರೆ, ಆದರೆ ಇಲ್ಲಿಂದ ಜಗದೀಶ್ ಶೆಟ್ಟರ್ ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ನಮಗೆ ತಿಳಿದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಜನರು ಮೋದಿಗೆ ಮತ ಹಾಕಿರುವುದರಿಂದ ನಮ್ಮ ಅಭ್ಯರ್ಥಿಗಳು ಸುರಕ್ಷಿತವಾಗಿದ್ದಾರೆ. ಹಾವೇರಿಯ ಕಾಂಗ್ರೆಸ್ ಮುಖಂಡ ಅನಿಲ್ ಪಾಟೀಲ ಮಾತನಾಡಿ, ನಾವೀಗ ಆನಂದಸ್ವಾಮಿ ಪರ ಪ್ರಚಾರ ಮಾಡುತ್ತಿದ್ದೇವೆ. ಗೆಲ್ಲುವ ವಿಶ್ವಾಸವಿದೆ. ಜನರು ಸಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top