ಉಡುಪಿ: ಮ್ಯಾನ್ಯುಯಲ್ ಸ್ಕ್ಯಾಂವೆಂಜಿಂಗ್ ಚಟುವಟಿಕೆ ನಡೆಸುವುದು ನಿರ್ಭಂದವಿದ್ದು ಇದನ್ನು ಉಲ್ಲಂಘಸಿದ್ದಲ್ಲಿ ಅಂತಹವರ ಮೇಲೆ ಕಾನೂನುನ ಅಡಿಯಲ್ಲಿ ಕ್ರಮಕೈಗೊಳ್ಳಬೇಕೆಂದು ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.
ಅವರು ಶುಕ್ರವಾರ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಹಾಗೂ ದೌರ್ಜನ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮ್ಯಾನ್ಯುಯಲ್ ಸ್ಕ್ಯಾಂವೆಂಜಿಂಗ್ ನಿಷೇಧವಿದ್ದು, ಈ ಕೆಲಸಕ್ಕೆ ಯಾವುದೇ ವ್ಯಕ್ತಿಯನ್ನು ಬಳಸಿಕೊಂಡರೆ ಅವರ ಮೇಲೆ ಮ್ಯಾನ್ಯುಯಲ್ ಸ್ಕ್ಯಾಂವೆಂಜಿಂಗ್‌ಗಳಾಗಿ ಉದ್ಯೋಗದ ನಿಷೇಧ ಹಾಗೂ ಅವರ ಪುನರ್ವಸತಿ ಕಾಯಿದೆದ ಅಡಿ 2 ವರ್ಷ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ಇದೆ ಜಿಲ್ಲೆಯಲ್ಲಿ ಯಾರೋಬ್ಬರು ಇದನ್ನು ಉಲ್ಲಂಘನೆ ಮಾಡಬಾರದು, ಒಂದೊಮ್ಮೆ ಉಲ್ಲಂಘಿಸಿದಲ್ಲಿ ನಿರ್ಧಾಕ್ಷಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಮ್ಯಾನ್ಯುಯಲ್ ಸ್ಕ್ಯಾಂವೆಂಜಿಂಗ್ ಪ್ರಕರಣ ಕುರಿತು ಯಾವುದೇ ದೂರು ಬಂದಲ್ಲಿ ತಕ್ಷಣ ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾತಯತ್ ನ ಪರಿಶೀಲನಾ ಅಧಿಕಾರಿಗಳು ತುರ್ತಾಗಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆಯೋಗಕ್ಕೆ ವರದಿ ಸಲ್ಲಿಸಬೇಕು ಎಂದರು.
ಮ್ಯಾನ್ಯುಯಲ್ ಸ್ಕ್ಯಾಂವೆಂಜಿಂಗ್ ಗಳಿಗೆ ಅಥವಾ ಮೃತ ಪಟ್ಟ ಮ್ಯಾನ್ಯುಯಲ್ ಸ್ಕಾö್ಯಂವೆಜರ್ ಕುಟುಂಬದ ಅವಲಂಬಿತರಿಗೆ ಗುರುತಿನ ಚೀಟಿ ಸೇರಿದಂತೆ ಸರ್ಕಾರ ಇವರ ಕಲ್ಯಾಣ ಹಾಗೂ ಪುರ್ನವಸತಿಗಾಗಿ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಅರಿವು ಮೂಡಿಸಿ ಅವರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಮ ಪಂಚಾಯಯತ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರು , ಲೋರ್ಡಸ್ ,ಕ್ಲೀರ‍್ಸ್ ಹಾಗೂ ಡೈವರ್ಸ್ ಪ್ರತಿ ಮಾಹೆ ಯ ವೇತನವನ್ನು ವಿಳಂಬವಿಲ್ಲ ದೆ ನೀಡಬೇಕು ಹಾಗೂ ಅವರುಗಳ ವಿಶ್ರಾಂತಿಗೆ ವಿಶ್ರಾಂತಿ ಗೃಹ ನಿರ್ಮಿಸಬೇಕು ಎಂದರು.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 15 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು ಈಗಾಗಲೇ 11 ಪ್ರಕರಣಗಳಲ್ಲಿ ಪರಿಹಾರ ನೀಡಲಾಗಿದೆ ಎಂದ ಅವರು ಬಾಕಿ ಉಳಿದ ಪ್ರಕರಣ ದಲ್ಲಿ ಶೀಘ್ರವಾಗಿ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ತಿಳಿಸಿದರು.
ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆ ಅಡಿ ವಸತಿ ಸೌಲಭ್ಯವನ್ನು ಆದ್ಯತೆ ಮೇಲೆ ಒದಗಿಸಲು ಮುಂರುವ ಪ್ರಸಕ್ತ ಸಾಲಿನಲ್ಲಿ ಕ್ರಿಯಾ ಯೋಜನೆಗೆ ಸೇರಿಸಕೊಳ್ಳಬೇಕು ಎಂದರು.
ಪೌರ ಕಾರ್ಮಿಕರಿಗೆ ಅತ್ಯುತ್ತಮ ಗುಣಮಟ್ಟದ ಸುರಕ್ಷತಾ ಪರಿಕರಗಳನ್ನು ಒದಗಿಸಬೇಕು. ಕಾಲಕಾಲಕ್ಕೆ ಅವರುಗಳ ಸಾಮಾನ್ಯ ಆರೋಗ್ಯ ತಪಾಸಣೆ ಹಾಗೂ ಮಾಸ್ಟರ್ ಹೆಲ್ತ್ ಚೆಕ್‌ಅಪ್‌ಗಳನ್ನು ಮಾಡಿಸಬೇಕು ಹಾಗೂ ಅವರುಗಳಿಗೆ ಉತ್ತಮ ಗುಣಮಟ್ಟದ ಉಪಾಹಾರಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು,ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ