ಕೋಲ್ಕತಾ: ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ತಾವು ಬಿಜೆಪಿ ಸೇರುವುದಾಗಿ ಮಂಗಳವಾರ ಘೋಷಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಭಿಜಿತ್ ಗಂಗೋಪಾಧ್ಯಾಯ ಅವರು, ಮಾರ್ಚ್ 7ರಂದು ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿರುವ ರಾಷ್ಟ್ರೀಯ ಪಕ್ಷ ಬಿಜೆಪಿಗೆ ನಾನು ಸೇರುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.
ಅಭಿಜಿತ್ ಗಂಗೋಪಾಧ್ಯಾಯ ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು, ಸಿಜೆಐ ಡಿವೈ ಚಂದ್ರಚೂಡ್ ಮತ್ತು ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ಅವರಿಗೆ ಕಳುಹಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ