ಶಿವಮೊಗ್ಗ: ನಗರದ ಶರಾವತಿನಗರದ ಕಾಲಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವ, ಉಚಿತ ಸಾಮೂಹಿಕ ವಿವಾಹವನ್ನು ಏ.24 ರಂದು ಹಮ್ಮಿಕೊಳ್ಳಲಾಗಿದೆ. ಮದುವೆಯಾಗುವ ವಧು ವರರಿಗೆ ವಿವಾಹಕ್ಕೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಮಠವೇ ನೀಡುತ್ತದೆ.
ಹೆಣ್ಣಿಗೆ ತಾಳಿ, ಕಾಲುಂಗುರ, ಬಟ್ಟೆ ನೀಡಿದರೆ. ಗಂಡಿಗೆ ಅಂಗಿ,ಪಂಚೆ, ಕಲ್ಪವೃಕ್ಷ ನೀಡಲಾಗುವುದು. ಆಸಕ್ತ ವಧು ವರರು ತಮ್ಮ ಇತ್ತೀಚಿನ ಭಾವಚಿತ್ರ,ಆಧಾರ್ ಕಾರ್ಡ್, ಜಾತಿ ಹಾಗೂ ಜನನ ಪ್ರಮಾಣ ಪತ್ರ,ಗ್ರಾಮ ಪಂಚಾಯಿತಿ ಅಥವಾ ನಗರಸಭೆಯಿಂದ ಪಡೆದ ದೃಢೀಕರಣ ಪತ್ರದೊಂದಿಗೆ ತಾವು ಹಾಗೂ ತಮ್ಮ ಪೋಷಕರೊಂದಿಗೆ ಬಂದು, ದಿನಾಂಕ : 10/04/2024 ರೊಳಗೆ ತಮ್ಮ ಹೆಸರನ್ನು ಮೇಲ್ಕಂಡ ವಿಳಾಸದಲ್ಲಿ ನೋಂದಾಯಿಸಿಕೊಳ್ಳಬೇಕೆಂದು ಕೋರುತ್ತೇವೆ.
ಆದರ್ಶ ದಂಪತಿಗಳಿಗೆ ಸನ್ಮಾನ :
ಪ್ರತಿ ವರ್ಷದಂತೆ ವಿವಾಹವಾಗಿ 50 ವರ್ಷ ತುಂಬಿದ ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನವೂ ಸಹ ಇರುತ್ತದೆ. ಪ್ರಸನ್ನನಾಥ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ, 08182-257958, 254141, 9742885627 ಸಂಪರ್ಕಿಸಬಹುದು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ