ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಉಡೇವಾ ಗ್ರಾಮದ ಕೃಷ್ಣಮೂರ್ತಿ ಆರ್ ರವರು ಸಲ್ಲಿಸಿದ "ಕನ್ನಡ ಸಮಕಾಲೀನ ವಿಮರ್ಶೆಗಳಲ್ಲಿ ಸಾಂಸ್ಕೃತಿಕ ಬಿಕ್ಕಟ್ಟುಗಳ ಸ್ವರೂಪ" ಎಂಬ ವಿಷಯದ ಕುರಿತ ಸಂಶೋಧನಾ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲವು ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್ ಡಿ) ಪದವಿ ನೀಡಿದೆ. ಕುವೆಂಪು ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕರಾದ ಡಾ.ನೆಲ್ಲಿಕಟ್ಟೆ.ಎಸ್. ಸಿದ್ದೇಶ್ ರವರು ಸಂಶೋಧನಾ ಪ್ರಬಂಧಕ್ಕೆ ಮಾರ್ಗದರ್ಶನ ನೀಡಿದ್ದಾರೆ.
ಕೃಷ್ಣಮೂರ್ತಿರವರು ಉಡೇವಾ ಗ್ರಾಮದ ರಾಜಪ್ಪ ಮತ್ತು ಮಂಜಮ್ಮರವರ ಪುತ್ರ. ಪ್ರಸ್ತುತ ಇವರು ಬೆಂಗಳೂರಿನ ಕಂದಾಯ ಇಲಾಖೆ, ಕಂದಾಯ ಆಯುಕ್ತಾಲಯ ರಾಜಸ್ವ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆ ಮೂಲಕ ಸಹಾಯಕ ಪ್ರಾಧ್ಯಾಪಕರಾಗಿಯೂ ಆಯ್ಕೆಯಾಗಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ