ಹೊಸದಿಲ್ಲಿ: ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ. ಶನಿವಾರ ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯ ಚುನಾವಾಣಾ ಆಯುಕ್ತ ರಾಜೀವ್ ಕುಮಾರ್, ಎಪ್ರಿಲ್ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಎಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದ್ದು ಜೂ.4 ರಂದು ಫಲಿತಾಂಶ ನಡೆಯಲಿದೆ ಎಂದು ರಾಜೀವ್ ಕುಮಾರ್ ಹೇಳಿದರು.
ಪ್ರಸ್ತುತ ಲೋಕಸಭೆಯ ಅವಧಿ ಜೂನ್ 16ಕ್ಕೆ ಕೊನೆಗೊಳ್ಳಲಿದೆ. ಅದಕ್ಕೆ ಮುನ್ನ ಹೊಸ ಸರ್ಕಾರ ರಚನೆಯಾಗಬೇಕಿದೆ. 10 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳು ಇರಲಿವೆ. ಸುಮಾರು 97 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಮತದಾನಕ್ಕೆ 55 ಲಕ್ಷ EVM ಬಳಕೆಯಾಗಲಿದೆ. 12 ರಾಜ್ಯಗಳಲ್ಲಿ ಪುರುಷ ಮತದಾರರರಿಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ. 1.8 ಕೋಟಿ ಮತದಾರರು ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ ಎಂದು ರಾಜೀವ್ ಕುಮಾರ್ ತಿಳಿಸಿದ್ದಾರೆ.
49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ ಮತ್ತು 48 ಸಾವಿರ ತೃತೀಯ ಲಿಂಗಿ ಮತದಾರರು ಮತಚಲಾಯಿಸಲಿದ್ದಾರೆ.
85 ವರ್ಷ ಮೇಲ್ಪಟ್ಟವರಿಗೆ ಹಾಗೂ ಶೇ. 40ಕ್ಕಿಂತ ಹೆಚ್ಚಿನ ಅಂಗವೈಕಲ್ಯತೆ ಇರುವವರಿಗೆ ಮನೆಯಿಂದಲೇ ಮತದಾನ ಅವಕಾಶ ಒದಗಿಸಲಾಗಿದೆ. ಮತಗಟ್ಟೆಗಳಲ್ಲಿ ಮಾಹಿತಿ ಕೇಂದ್ರ, ಕುಡಿಯುವ ನೀರಿನ ವ್ಯವಸ್ಥೆ ಇರಲಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಮೇಲಿನ ಕ್ರಿಮಿನಲ್ ಪ್ರಕರಣಗಳನ್ನು ಸಾರ್ವಜನಿಕರಿಗೆ ನೀಡುವುದು ಕಡ್ಡಾಯ. ಮತದಾನದ ವೇಳೆ ಗಲಬೆ ನಡೆಸಿದರೆ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲಾಗುವುದು. ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.
ಪ್ರತಿ ಜಿಲ್ಲೆಯಲ್ಲೂ ಚುನಾವಣಾ ನಿಯಂತ್ರಣ ಕೊಠಡಿ ಸ್ಥಾಪನೆ. ಗಡಿ ಭಾಗದಲ್ಲಿ ಚೆಕ್ ಪೋಸ್ಟ್ ಸ್ಥಾಪನೆ ಹಾಗೂ ಡ್ರೋನ್ ಕಣ್ಗಾವಲು ಇರಲಿದೆ. ಮಕ್ಕಳನ್ನು ಚುನಾವಣಾ ಪ್ರಚಾರ ಕಾರ್ಯದಲ್ಲಿ ಬಳಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಸೇರಿ ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಚುನಾವಣೆ
ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣೆ
ಮಂಗಳೂರು: ರಾಜ್ಯದಲ್ಲಿ ಏಪ್ರಿಲ್ 26 ರಂದು ದ.ಕ ಜಿಲ್ಲೆ ಸೇರಿದಂತೆ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರಕ್ಕೆ ಮತದಾನ ನಡೆಯಲಿದೆ. ಜೂ.4 ರಂದು ಫಲಿತಾಂಶ ನಡೆಯಲಿದೆ.
ದೇಶದಲ್ಲಿ 7 ಹಂತದ ಮತದಾನ:
ಮತದಾನದ 7 ಹಂತಗಳು, ಕ್ಷೇತ್ರಗಳು
ಮೊದಲ ಹಂತ – ಏಪ್ರಿಲ್ 19 – 102 ಕ್ಷೇತ್ರ
ಎರಡನೇ ಹಂತ – ಏಪ್ರಿಲ್ 26 – 89 ಕ್ಷೇತ್ರ
ಮೂರನೇ ಹಂತ – ಮೇ 07 – 94 ಕ್ಷೇತ್ರ
ನಾಲ್ಕನೇ ಹಂತ – ಮೇ 13 – 96 ಕ್ಷೇತ್ರ
ಐದನೇ ಹಂತ – ಮೇ 20 – 49 ಕ್ಷೇತ್ರ
ಆರನೇ ಹಂತ – ಮೇ 25 – 57 ಕ್ಷೇತ್ರ
ಏಳನೇ ಹಂತ – ಜೂನ್ 01 – 57 ಕ್ಷೇತ್ರ
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ