ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟರಿಂದ ಯೋಧರಿಗೆ ನಮನ

Upayuktha
0

 


ಮಂಗಳೂರು: ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆ ಆದ ಬಳಿಕ ಕ್ಯಾಪ್ಚನ್ ಬ್ರಿಜೇಶ್ ಚೌಟ ಅವರು ಸಂಘದ ಕಾರ್ಯಾಲಯ ಸಂಘ ನಿಕೇತನಕ್ಕೆ ಭೇಟಿ ಮಾಡಿ ಹಿರಿಯರ ಆಶೀರ್ವಾದ ಪಡೆದು ನಂತರ ಕೆಪಿಟಿ ಬಳಿ ಇರುವ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದರು.


ಬಳಿಕ ಬಿಜೆಪಿ ಜಿಲ್ಲಾ ಕಾರ್ಯಾಲಯಕ್ಕೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಮಾತನಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಹಿಂದುತ್ವ ಹಾಗೂ ಅಭಿವೃದ್ಧಿಯೇ ನನ್ನ ಆದ್ಯತೆ. ಈ ಮೂಲಕ ಜಿಲ್ಲೆಯಲ್ಲಿ ಅಭಿವೃದ್ದಿಯ ಹೊಸ ಮಜಲನ್ನು ಸೃಷ್ಟಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂಬ ಭರವಸೆ ನೀಡುತ್ತೇನೆ. ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಅವಕಾಶ ಮಾಡಿಕೊಟ್ಟದ್ದಕ್ಕೆ ಬಿಜೆಪಿ ವರಿಷ್ಠರಿಗೆ ಹಾಗೂ ನನ್ನ ನೆಚ್ಚಿನ ದೇವ ದುರ್ಲಭ ಕಾರ್ಯಕರ್ತರಿಗೆ ಆಭಾರಿ ಆಗಿದ್ದೇನೆ ಎಂದು ಹೇಳಿದರು.


ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಚುನಾವಣಾ ಸಂಚಾಲಕ ನಿತಿನ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಉಪಾಧ್ಯಕ್ಷೆ ಪೂಜಾ ಪೈ,  ಶಾಂತಿ ಪ್ರಸಾದ್ ಹೆಗ್ಡೆ, ರವೀಂದ್ರ ಶೆಟ್ಟಿ ಉಳಿದೊಟ್ಟು, ಕೋಶಾಧಿಕಾರಿ ಸಂಜಯ ಪ್ರಭು, ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಮಹೇಶ್ ಜೋಗಿ, ಕಿರಣ್ ಕುಮಾರ್, ವಸಂತ್ ಪೂಜಾರಿ, ಮನೋಹರ್ ಕದ್ರಿ, ಅರುಣ್ ಜಿ. ಶೇಟ್ ಉಪಸ್ಥಿತರಿದ್ದು ಶುಭ ಹಾರೈಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top