ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ವತಿಯಿಂದ ಪೇಜಾವರ ಶ್ರೀಗಳಿಗೆ ಸ್ವಾಗತ

Upayuktha
0

ಮಂಗಳೂರು: ಅಯೋಧ್ಯೆಯಲ್ಲಿ 48 ದಿನಗಳ ಮಂಡಲೋತ್ಸವವನ್ನು ಪೂರ್ಣಗೊಳಿಸಿ ಮರಳಿದ ಪೇಜಾವರ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಭಕ್ತಿಪೂರ್ವಕವಾಗಿ ಬರಮಾಡಿಕೊಳ್ಳಲಾಯಿತು.


ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಹಿಂದೂಗಳ ಪಾಲಿನ ಅತ್ಯಂತ ಪವಿತ್ರ ತೀರ್ಥಕ್ಷೇತ್ರವಾದ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆಯ ನಂತರ ಪೇಜಾವರ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಜನವರಿ 23 ರಿಂದ ಮಾರ್ಚ್ 11ವರೆಗೆ ಶ್ರದ್ಧಾಭಕ್ತಿಯಿಂದ ಮಂಡಲ ಪೂಜೆ ನೆರವೇರಿದೆ. ಇದೀಗ ಆ ಪವಿತ್ರ ಕ್ಷೇತ್ರದಿಂದ ಪುಣ್ಯಭೂಮಿ ತುಳುನಾಡಿಗೆ ಆಗಮಿಸಿರುವ ಶ್ರೇಷ್ಠ ಸಂತರನ್ನು ಸ್ವಾಗತಿಸುವ ಸೌಭಾಗ್ಯ ನಮ್ಮೆಲ್ಲರದ್ದು ಎಂದರು. 


ಈ ಸಂದರ್ಭದಲ್ಲಿ ರಮೇಶ್ ಕಂಡೆಟ್ಟು, ವಿಜಯ್ ಕುಮಾರ್ ಶೆಟ್ಟಿ, ಮ.ನ.ಪಾ ಸದಸ್ಯರಾದ ಪೂರ್ಣಿಮಾ, ಮನೋಹರ್ ಕದ್ರಿ, ಬಿಜೆಪಿ ಪ್ರಮುಖರಾದ ನಂದನ್ ಮಲ್ಯ, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಪೂರ್ಣಿಮಾ ರಾವ್, ನೀಲೇಶ್ ಕಾಮತ್, ವಿನೋದ್ ಮೆಂಡನ್, ಮೋಹನ್ ಪೂಜಾರಿ, ರಾಜೇಂದ್ರ, ಪ್ರಕಾಶ್, ರಾಹುಲ್, ರಾಮ್ ಪ್ರಸಾದ್, ಪ್ರಶಾಂತ ಮರೋಳಿ, ಮುಂತಾದವರ ಸಹಿತ ವಿಹಿಂಪ ಪ್ರೊ. ಎಂ.ಬಿ ಪುರಾಣಿಕ್, ಸುಧಾಕರ ಪೇಜಾವರ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top