ಉಜಿರೆ: ಬಂಧನ ಮಾಡಲು ಬಂದ ಪೊಲೀಸರಿಂದ ಮಹೇಶ್ ಶೆಟ್ಟಿ ತಿಮರೋಡಿ ತಪ್ಪಿಸಿಕೊಂಡು ಓಡಿ ಹೋದ ಘಟನೆ ಇಂದು ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ಅವಹೇಳನಕಾರಿ ಹೇಳಿಕೆ ನೀಡಿದ ಮತ್ತು ಸುಳ್ಳು ಆರೋಪಗಳನ್ನು ಮಾಡಿದ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಆತನ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಲು ಧಾರವಾಡದಿಂದ ಪೊಲೀಸರ ತಂಡವೊಂದು ತಿಮರೋಡಿಯ ಮನೆಗೆ ಮಾರ್ಚ್ 16 ರಂದು ಕೋರ್ಟ್ ಆದೇಶದ ಸಹಿತ ಬಂದಿದ್ದರು.
ಕೋರ್ಟ್ ಆದೇಶ ಪಡೆದು, ಅದನ್ನು ಓದಿದ ನಂತರ ಬಟ್ಟೆ ಬದಲಾಯಿಸಿಕೊಂಡು ಬರುತ್ತೇನೆ ಎಂದು ಪೊಲೀಸರಿಗೆ ಹೇಳಿದ ಮಹೇಶ್ ಶೆಟ್ಟಿ ತಿಮರೋಡಿ ಮನೆಯ ಹಿಂದಿನ ಬಾಗಿಲಿನಿಂದ ಪರಾರಿಯಾದ ಘಟನೆ ನಡೆದಿದ್ದು ಆತನಿಗಾಗಿ ಹುಡುಕುತ್ತಿದ್ದಾರೆಂದು ತಿಳಿದುಬಂದಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ದ ಸಾರ್ವಜನಿಕವಾಗಿ ಅವಹೇಳನೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಆತನ ಸಹಚರರ ವಿರುದ್ಧ ರಾಜ್ಯದ ವಿವಿಧೆಡೆಗಳಲ್ಲಿ ಭಕ್ತರು ದೂರು ದಾಖಲಿಸಿದ್ದು ಅವುಗಳಿಗೆ ಸಂಬಂಧಿಸಿದಂತೆ ಇದೀಗ ಕಾನೂನು ಪ್ರಕ್ರಿಯೆಗಳಿಗೆ ಚಾಲನೆ ದೊರೆತಿದೆ. ಈ ಹಿನ್ನೆಲೆಯಲ್ಲಿ ಮಾನಹಾನಿ ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ ಹಲವರು ಬಂಧನಕ್ಕೊಳಗಾಗುವ ಸಾಧ್ಯತೆಗಳು ನಿಚ್ಚಳವಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ