ಮಂಗಳೂರು: ಕೆನರಾ ಕಾಲೇಜಿನ 51ನೆ ವಾರ್ಷಿಕ ಕ್ರೀಡಾ ಕೂಟವು ಮಂಗಳ ಕ್ರೀಡಾಂಗಣದಲ್ಲಿ ನಡೆಯಿತು. ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟ್ ಗಿರಿಧರ್ ಸಾಲಿಯಾನ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಸತತ ಪ್ರಯತ್ನದಿಂದ ವೈಫಲ್ಯಗಳನ್ನು ಯಶಸ್ಸನ್ನಾಗಿ ಪರಿವರ್ತಿಸಬಹುದು. ಶಾರೀರಿಕ ಆರೋಗ್ಯವು ಸಂತೋಷದ ಮೂಲವಾಗಿದೆ. ಕಠಿಣ ಪರಿಶ್ರಮ ಮತ್ತು ಆತ್ಮ ವಿಶ್ವಾಸ ಸಂಕಲ್ಪ ಸಮರ್ಪಣೆ ಮತ್ತು ಶಿಸ್ತು ಖಂಡಿತವಾಗಿಯೂ ಫಲ ನೀಡುತ್ತದೆ. ಅಸಾಧ್ಯವಾದುದನ್ನು ಮೀರಿದ ಸಾಮರ್ಥ್ಯವನ್ನು ತೋರಿಸುವಂತೆ ಮಾಡುತ್ತದೆ ಎಂದು ಅವರು ಹೇಳಿದರು.
ಕೆನರಾ ಆಡಳಿತ ಮಂಡಳಿಯ ಕೋಶಾಧಿಕಾರಿ ಸಿಎ ಎಂ ವಾಮನ ಕಾಮತ್ ಅಧ್ಯಕ್ಷತೆ ವಹಿಸಿದ್ದು ಕ್ರೀಡಾ ಮನೋಭಾವವನ್ನು ಜೀವನದುದ್ದಕ್ಕೂ ಮುಂದುವರಿಸಿಕೊಂಡು ಸತ್ಯದ ಹಾದಿಯಲ್ಲಿ ನಡೆಯಬೇಕು ಎಂದು ಹೇಳಿದರು.
ಕಾಲೇಜು ಪ್ರಾಂಶುಪಾಲೆ ಡಾ.ಪ್ರೇಮಲತಾ ವಿ, ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್, ವ್ಯವಸ್ಥಾಪಕ ರಾದ ಕೆ ಶಿವಾನಂದ ಶೆಣೈ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಗುರುರಾಜ ಶೇಟ್, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಅವಿನಾಶ್, ಕಾರ್ತಿಕ್ ಉಪಸ್ಥಿತರಿದ್ದರು. ಪ್ರೊ ಕೀರ್ತಿ ಆಳ್ವ ಸ್ವಾಗತಿಸಿ, ಕುಮಾರಿ ಪೂಜಾ ಯಶೋಧರ್ ವಂದಿಸಿದರು. ಉಪನ್ಯಾಸಕಿ ಮಧುಶ್ರೀ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ