ಬಳ್ಳಾರಿಯ ಭಾರತೀಯ ಜನತಾ ಪಾರ್ಟಿ ಕಚೇರಿಗೆ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಭೇಟಿ

Upayuktha
0

 



ಬಳ್ಳಾರಿ: ವಿಜಯನಗರ ಜಿಲ್ಲೆಯ ಲೋಕಸಭಾ ಚುನಾವಣಾ ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಜಿಲ್ಲೆಯ ಪಕ್ಷದ ಪ್ರಮುಖರ ಅಭಿಪ್ರಾಯವನ್ನು ಸಂಗ್ರಹಿಸುವ ದೃಷ್ಟಿಯಿಂದ ಬಳ್ಳಾರಿಯ ಭಾರತೀಯ ಜನತಾ ಪಾರ್ಟಿ ಕಚೇರಿಗೆ ಮಂಗಳೂರು ನಗರ ದಕ್ಷಿಣದ ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ನೀಡಿದರು.




ಪಕ್ಷದ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಮಂಡಲದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಹಾಗೂ ಜಿಲ್ಲೆಯಿಂದ-ಮಂಡಲದಿಂದ ರಾಜ್ಯಕ್ಕೆ ಜವಾಬ್ದಾರಿ ಹೊಂದಿರುವ ಪ್ರಮುಖರಿಂದ ಅಭಿಪ್ರಾಯವನ್ನು ಸಂಗ್ರಹಿಸಲಾಗಿದ್ದು ಅದನ್ನು ರಾಜ್ಯದ ಪ್ರಮುಖರಿಗೆ ಕಳುಹಿಸಿಕೊಡಲಾಗುತ್ತದೆ. ಅಭಿಪ್ರಾಯ ಸಂಗ್ರಹ ದೃಷ್ಟಿಯಿಂದ ಸಂಪೂರ್ಣವಾಗಿ ಸಹಕರಿಸಿದ ಮತ್ತು ಪ್ರೀತಿಪೂರ್ವಕ ಆತಿಥ್ಯ ನೀಡಿದ ಬಳ್ಳಾರಿಯ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರ ಸಹಿತ ಎಲ್ಲ ಪದಾಧಿಕಾರಿಗಳಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು.




ಜಿಲ್ಲೆಯ ಲೋಕಸಭಾ ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆಯ ಅಭಿಪ್ರಾಯ ಸಂಗ್ರಹದಂತಹ ಮಹತ್ತರ ಜವಾಬ್ದಾರಿಗೆ ತಮ್ಮನ್ನು ನಿಯೋಜಿಸಿದ ಬಿಜೆಪಿ ರಾಜ್ಯಾಧ್ಯಕ್ಷರಾದ  ಬಿ.ವೈ ವಿಜಯೇಂದ್ರ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ  ರಾಜೇಶ್ ಜಿ.ವಿ ಯವರಿಗೂ ಶಾಸಕರು ವಿಶೇಷ ಧನ್ಯವಾದಗಳನ್ನು ಸಮರ್ಪಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top