ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ದೇವೇಂದ್ರಪ್ಪ ಹೆಚ್. ಅವರನ್ನು ವಿಶ್ವವಿದ್ಯಾನಿಲಯದ ಕುಲಸಚಿವ (ಮೌಲ್ಯಮಾಪನ) ರಾಗಿ ನೇಮಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, 2000 ರ 18 ನೇ ಪ್ರಕರಣದ (1) ನೇ ಉಪ ಪ್ರಕರಣದಡಿ ಪ್ರವತ್ತವಾದ ಅಧಿಕಾರ ಚಲಾಯಿಸಿ, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ ಆದೇಶದವರೆಗೆ ನೇಮಿಸಿ ಆದೇಶ ಹೊರಡಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ